ರಾಜಕೀಯ

ಋಣ ಮುಕ್ತ ಕಾಯ್ದೆ ಶೀಘ್ರದಲ್ಲಿಯೇ ಜಾರಿಗೆ: ಸಿಎಂ ಕುಮಾರಸ್ವಾಮಿ

ಧನಿಕರು ಸಾಲ ನೀಡಿ ಬಡ್ಡಿ, ಚಕ್ರ ಬಡ್ಡಿ ಹಾಕಿ ಸಾಲದ ಶೂಲದಲ್ಲಿ ಸಿಲುಕಿರುವ ಬಡವರನ್ನು ರಕ್ಷಿಸಲು ಮುಂದಿನ 15 ದಿನಗಳಲ್ಲಿ ಋಣ ಮುಕ್ತ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...

ಋಣ ಮುಕ್ತ ಕಾಯ್ದೆ ಶೀಘ್ರದಲ್ಲಿಯೇ ಜಾರಿಗೆ: ಸಿಎಂ ಕುಮಾರಸ್ವಾಮಿ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Published On :
ಬೆಂಗಳೂರು: ಧನಿಕರು ಸಾಲ ನೀಡಿ ಬಡ್ಡಿ, ಚಕ್ರ ಬಡ್ಡಿ ಹಾಕಿ ಸಾಲದ ಶೂಲದಲ್ಲಿ ಸಿಲುಕಿರುವ ಬಡವರನ್ನು ರಕ್ಷಿಸಲು ಮುಂದಿನ 15 ದಿನಗಳಲ್ಲಿ ಋಣ ಮುಕ್ತ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಎಲ್ಆರ್ ಶಿವರಾಮೇಗೌಡ ಅವರ ಪರ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರೈತರ ಎಲ್ಲಾ ರೀತಿಯ ಸಾಲಗಳನ್ನು ಮನ್ನಾ ಮಾಡಲು ನಾವು ಬದ್ಧರಾಗಿದ್ದೇವೆ. ರೈತರ ಸಾಲ ಮನ್ನಾ ಮಾಡಲು ನಾವು ಸತತ ಯತ್ನಗಳನ್ನು ನಡೆಸುತ್ತಿದ್ದೇವೆ. ಆದರೆ, ಸಾಲ ಮನ್ನಾ ಕುರಿತಂತೆ ರಾಷ್ಟ್ರೀಕೃತ ಬ್ಯಾಂಕ್ ಗಳ ಸಹಾಯ ಪಡೆಯುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಬದಲು ಬಿಜೆಪಿ ರಾಜ್ಯಾಧ್ಯಕ್ಷರು ಕೇವಲ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. 
ಬಿಜೆಪಿ ನಾಯಕರು ರಾಜ್ಯದ ಜನತೆಯನ್ನು ತಪ್ಪು ಹಾದಿಗೆಳೆಯುತ್ತಿದ್ದಾರೆ. ಈ ಹಿಂದೆ ರಾಜ್ಯ ಬಜೆಟ್ ಕುರಿತಂತೆ ಟೀಕೆಗಳನ್ನು ಮಾಡಿದ್ದ ಬಿಜೆಪಿ, ಸರ್ಕಾರದ ಬಜೆಟ್ ರಾಜ್ಯದ ಪರವಾಗಿಲ್ಲ, ಕೇವಲ ಮಂಡ್ಯ ಪರವಾದ ಬಜೆಟ್ ಆಗಿತ್ತು ಎಂದು ಹೇಳಿದ್ದರು. ಇದೀಗ ಅವರ ಪಕ್ಷಕ್ಕೆ ಮಂಡ್ಯ ಜನತೆಯ ಬೆಂಬಲ ಬೇಕಿದೆ ಎಂದು ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.