ಸಾಲ ಮನ್ನಾದಿಂದ 15 ಲಕ್ಷ ರೈತರಿಗೆ ಅನುಕೂಲ- ಹೆಚ್. ಡಿ. ರೇವಣ್ಣ
ರಾಜ್ಯ ಸರ್ಕಾರದ ಸಾಲಮನ್ನಾ ಘೋಷಣೆಯಿಂದ ರಾಜ್ಯದ 15 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ.

ಬಳ್ಳಾರಿ: ರಾಜ್ಯ ಸರ್ಕಾರದ ಸಾಲಮನ್ನಾ ಘೋಷಣೆಯಿಂದ ರಾಜ್ಯದ 15 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ , ರೈತರ ಸಾಲ ಮನ್ನಾ ಆಗಿರುವ ಎಲ್ಲಾ ರೈತರಿಗೆ ಸರ್ಕಾರ ಪ್ರಮಾಣ ಪತ್ರ ನೀಡಲಿದ್ದು, ಇನ್ನೂ 15-20 ದಿನಗಳ ಕಾಲ ರೈತರು ಕಾಯುವಂತೆ ತಿಳಿಸಿದರು.
ಬಳ್ಳಾರಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ. ಎಸ್. ಉಗ್ರಪ್ಪ ಪರವಾಗಿ ಬಿರುಸಿನ ಪ್ರಚಾರ ನಡೆಸಿದ ರೇವಣ್ಣ, ಸರ್ಕಾರ ಇನ್ನೂ ಟೇಕಾಪ್ ಆಗಿಲ್ಲ ಎಂಬ ಬಿಜೆಪಿ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದರು.
ಯಾವ ಅರ್ಥದಲ್ಲಿ ಅವರು ಆ ರೀತಿಯಲ್ಲಿ ಹೇಳುತ್ತಿದ್ದರೋ ಗೊತ್ತಿಲ್ಲ , ಸರ್ಕಾರ 49 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದೆ. ಸಹಕಾರ ಕ್ಷೇತ್ರದಲ್ಲಿನ 9 ಸಾವಿರ ಕೋಟಿ ರೂಪಾಯಿ, ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 36 ಸಾವಿರ ಕೋಟಿ ರೂಪಾಯಿ ರೈತರ ಸಾಲವನ್ನು ಮನ್ನಾ ಮಾಡಲಾಗಿದೆ. ಶಿಕ್ಷಣ ವಲಯಕ್ಕೂ ದೊಡ್ಡ ಪ್ರಮಾಣದಲ್ಲಿ ಖರ್ಚು ಮಾಡಲಾಗಿದೆ.ಇಸ್ರೇಲ್ ಮಾದರಿಯ ಕೃಷಿ ಪದ್ಧತಿ ಪರಿಚಯಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜೆಡಿಎಸ್ ಕುಟುಂಬ ಪಕ್ಷ ಎಂದು ಪದೇ ಪದೇ ಟೀಕಿಸುವ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ ರೇವಣ್ಣ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಇವರಿಬ್ಬರ ಕುಟುಂಬ ಸದಸ್ಯರು ಹೊರತುಪಡಿಸಿದರೆ ಬೇರೆ ಯಾವ ಬಿಜೆಪಿ ಕಾರ್ಯಕರ್ತರ ಗೆಲುವಿನಲ್ಲಿ ಏಕೆ ಇವರಿಗೆ ವಿಶ್ವಾಸವಿಲ್ಲ, ರಾಮನಗರ ಕ್ಷೇತ್ರದಲ್ಲಿ ಅನಿತಾ ಕುಮಾರಸ್ವಾಮಿ ಜನರ ಆಯ್ಕೆಯಾಗಿದೆ. ಈ ವಿಚಾರದಲ್ಲಿ ಮಾತನಾಡಲು ಯಡಿಯೂರಪ್ಪ ಹಾಗೂ ಶ್ರೀರಾಮುಲುಗೆ ನೈತಿಕ ಹಕ್ಕಿಲ್ಲ ಎಂದರು.
ಸೂಟ್ ಕೇಸ್ ರಾಜಕಾರಣದ ಬಗ್ಗೆ ನಮ್ಮಗೆ ಗೊತ್ತಿಲ್ಲ. ಇದರ ಬಗ್ಗೆ ಬಿಜೆಪಿಗೆ ಚೆನ್ನಾಗಿ ಗೊತ್ತು. ಯಡಿಯೂರಪ್ಪ ಅವರನ್ನು ಸೋಲಿಸಲು ಬಿಜೆಪಿಯಲ್ಲೇ ಅನೇಕ ಮಂದಿ ಕಾಯುತ್ತಿದ್ದಾರೆ. ಯಡಿಯೂರಪ್ಪ ರಾಜಕೀಯವಾಗಿ ಮುಗಿಸಲು ಈಶ್ವರಪ್ಪ ಕೂಡಾ ಬಯಸಿದ್ದಾರೆ ಎಂದು ರೇವಣ್ಣ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


