ಉಪಚುನಾವಣೆ: ಮಂಡ್ಯದಲ್ಲಿ ಬಿಜೆಪಿ ನೆಲೆ ಕಂಡುಕೊಳ್ಳಲು ಅವಕಾಶ ?
ಮಂಡ್ಯ ಲೋಕಸಭಾ ಉಪ ಚುನಾವಣೆಯ ಕಣ ಜೆಡಿಎಸ್ ಪಕ್ಷಕ್ಕೆ ಪ್ರತಿಷ್ಠೆಯಂತಿರುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರ ನಡುವಿನ ಕಿತ್ತಾಟದಿಂದಾಗಿ ಒಕ್ಕಲಿಗ ಪ್ರಾಬಲ್ಯದ ಜಿಲ್ಲೆಯಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿಗೆ ಅವಕಾಶ ದೊರೆಯುವ ಸಾಧ್ಯತೆ ಕಂಡುಬರುತ್ತಿದೆ.

ಮಂಡ್ಯ : ಸಕ್ಕರೆ ನಾಡು ಮಂಡ್ಯ ಲೋಕಸಭಾ ಉಪ ಚುನಾವಣೆಯ ಕಣ ಜೆಡಿಎಸ್ ಪಕ್ಷಕ್ಕೆ ಪ್ರತಿಷ್ಠೆಯಂತಿರುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರ ನಡುವಿನ ಕಿತ್ತಾಟದಿಂದಾಗಿ ಒಕ್ಕಲಿಗ ಪ್ರಾಬಲ್ಯದ ಜಿಲ್ಲೆಯಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿಗೆ ಅವಕಾಶ ದೊರೆಯುವ ಸಾಧ್ಯತೆ ಕಂಡುಬರುತ್ತಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದಲ್ಲಿಯೂ ಜೆಡಿಎಸ್ ಪಕ್ಷದ ಶಾಸಕರೇ ಇದ್ದು, ಪಕ್ಷ ಉತ್ತಮ ಸ್ಥಿತಿಯಲ್ಲಿದೆ. ಆದರೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೆಚ್. ಡಿ. ದೇವೇಗೌಡ ಹಾಗೂ ಸಿದ್ದರಾಮಯ್ಯ ಒಂದಾಗಿದ್ದರೂ ತಳಮಟ್ಟದ ಕಾರ್ಯಕರ್ತರಲ್ಲಿ ಹೊಂದಾಣಿಕೆ ಕಂಡುಬರುತ್ತಿಲ್ಲ.
ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಜಾತಿ ಸಮೀಕರಣ ಹಾಗೂ ರಾಜಕೀಯ ಸ್ಥಿತಿಗತಿಗಳ ಪ್ರಕಾರ ಜೆಡಿಎಸ್ ಅಭ್ಯರ್ಥಿ ಎಲ್ . ಆರ್. ಶಿವರಾಮೇಗೌಡ ಬಹುತೇಕ ಗೆಲುವು ಸಾಧಿಸುವುದು ನಿಶ್ಚಿತ . ಹಿಂದಿನ ಆರು ಚುನಾವಣೆಗಳಲ್ಲಿ ಕಾಂಗ್ರೆಸ್ ನಾಲ್ಕು ಬಾರಿ ಗೆಲುವು ಸಾಧಿಸಿದೆ.
ಜೆಡಿಎಸ್ - ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಒಳ ಜಗಳ ಅರಿತೇ ಮುಖ್ಯ ಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ, ಸಾಲಮನ್ನಾ ಘೋಷಣೆ ಹಾಗೂ ಬಿಜೆಪಿ ಮಂಡ್ಯ ವಿರೋಧಿ ಎಂಬಂತೆ ಬಿಂಬಿಸುವ ಮೂಲಕ ಭಾವಾನಾತ್ಮಕವಾಗಿ ಜನರನ್ನು ಸೆಳೆಯುವ ನಾಟಕವಾಡುತ್ತಿದ್ದಾರೆ.
ಸಾಲಮನ್ನಾದಲ್ಲಿ ವಿಳಂಬ ಹಾಗೂ ಅನೇಕ ಷರತ್ತು ವಿಧಿಸಿರುವುದಕ್ಕೆ ಮಂಡ್ಯ ಜನರು ಅಸಮಾಧಾನಗೊಂಡಿದ್ದಾರೆ. ಕೆಲವರು ಶಿವರಾಮೇಗೌಡ ಪರ ಉತ್ತಮ ಅಭಿಪ್ರಾಯ ಹೊಂದಿಲ್ಲ. ಪಾಂಡವಪುರ ಸಕ್ಕರೆ ಕಾರ್ಖಾನೆ ಪುನಶ್ಚೇತನ ವಿಚಾರದಲ್ಲೂ ಕೂಡಾ ಸರ್ಕಾರ ಮೌನ ವಹಿಸಿದೆ.ಈ ಹಿಂದಿನ ಚುನಾವಣೆಯಲ್ಲಿ ರಮ್ಯಾ ಅವರನ್ನು ಬೆಂಬಲಿಸಿದ ಅಹಿಂದ ನಾಯಕರು ಅಡ್ಡದಾರಿ ಹಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


