ರಾಜಕೀಯ

ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇಲ್ಲ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲ್ಲ: ಜನಾರ್ದನ ರೆಡ್ಡಿ

ಲಿಂಗಾಯತ - ವೀರಶೈವ ಧರ್ಮ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅದನ್ನು ಒಡೆಯುವ ಪ್ರಯತ್ನವನ್ನು ಕಾಂಗ್ರೆಸ್​ ಪಕ್ಷ ಮಾಡಿತು....

ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇಲ್ಲ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲ್ಲ: ಜನಾರ್ದನ ರೆಡ್ಡಿ
ಜನಾರ್ಧನ ರೆಡ್ಡಿ
Published On :
ಹಾನಗಲ್: ಲಿಂಗಾಯತ - ವೀರಶೈವ ಧರ್ಮ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅದನ್ನು ಒಡೆಯುವ ಪ್ರಯತ್ನವನ್ನು ಕಾಂಗ್ರೆಸ್​ ಪಕ್ಷ ಮಾಡಿತು.  ಭಗವಂತ ಆ ಶಾಪದಿಂದ ಪಕ್ಷ ಅಧಿಕಾರ ಕಳೆದುಕೊಳ್ಳುವಂತೆ ಆಗಿದೆ ಎಂದು ಬಿಜೆಪಿ ಮುಖಂಡ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. 
ಹಾನಗಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯಲ್ಲಿ ಒಂದು ಲಕ್ಷ ಕೋಟಿ ಲೂಟಿ ಮಾಡಿರುವುದಾಗಿ ಸಿದ್ದರಾಮಯ್ಯ ಅಪಪ್ರಚಾರ ಮಾಡಿದ್ದರು. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಒಂದೂವರೆ ಲಕ್ಷ ಕೋಟಿ ಎಂದು ಆರೋಪಿಸಿದ್ದರು. ಆದರೆ ನನ್ನಿಂದ ಒಂದು ಕೋಟಿ ರೂಪಾಯಿ ಕೂಡಾ ವಸೂಲಿ ಮಾಡಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ನನ್ನ ಅಮೂಲ್ಯವಾದ ನಾಲ್ಕು ವರ್ಷಗಳ ಕಾಲವನ್ನು ಜೈಲಿಗೆ ಕಳುಹಿಸಿ ಹಾಳು ಮಾಡಿದರು. ಸಿದ್ದರಾಮಯ್ಯನವರಿಗೆ ಮಾನ ಮರ್ಯಾದೆ ಇದೆಯಾ? ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲಾದವರೆಲ್ಲಾ ಈಗ ಸಿದ್ದರಾಮಯ್ಯನ ಜೊತೆ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಪಪ್ರಚಾರ ಮಾಡುವ ಮೂಲಕ ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ದಾರೆ. ಮಾನ ಮರ್ಯಾದೆ ಇಲ್ಲದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವುದು ಯಾಕೆ ಎಂದು ಸುಮ್ಮನಾದೆ. ಅದೇ ರೀತಿ ಜನಾರ್ದನ ರೆಡ್ಡಿ ಯಾರು ಎಂಬುದನ್ನು ಸಮ್ಮಿಶ್ರ ಸರ್ಕಾರಕ್ಕೆ ತೋರಿಸಿಕೊಡುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.