ಮೋದಿ ಜನಪ್ರಿಯತೆ ಕ್ಷೀಣಿಸುತ್ತಿದೆ,ದೇಶದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ: ಎಚ್.ಡಿ ಕೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನೇ ದಿನೇ ಕ್ಷೀಣಿಸುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸದ್ಯ ನಡೆಯುತ್ತಿರುವ ...

Published On :
ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನೇ ದಿನೇ ಕ್ಷೀಣಿಸುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸದ್ಯ ನಡೆಯುತ್ತಿರುವ ಉಪ ಚುನಾವಣೆ, ದೇಶದ ಜನತೆಗೆ ಹೊಸ ಸಂದೇಶವನ್ನು ನೀಡುತ್ತದೆ ಎಂದು ಹೇಳಿದ್ದಾರೆ.
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಶಿರಾಳಿಕೊಪ್ಪದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಮೋದಿ ಸರ್ಕಾರ ದೇಶದ ಜನತೆಯ ದಾರಿ ತಪ್ಪಿಸುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಅಬ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಬೇಕೆಂದು ಕುಮಾರ ಸ್ವಾಮಿ ಮನವಿ ಮಾಡಿದ್ದಾರೆ, ಒಂದು ವೇಳೆ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿದರೇ ದೇಶದ ಜನತೆಗೆ ಪ್ರಬಲ ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


