ರಾಜಕೀಯ

ಭಿನ್ನಾಭಿಪ್ರಾಯ ಶಮನಕ್ಕೆ ಹೊರಗಿನವರ ಮಧ್ಯಪ್ರವೇಶ ಅಗತ್ಯವಿಲ್ಲ: ಸತೀಶ್ ಜಾರಕಿಹೊಳಿ

ಭಿನ್ನಾಭಿಪ್ರಾಯದ ವಿಷಯ ಕುರಿತಾದ ಸಂಧಾನಕ್ಕೆ ಹೊರಗಿನವರು ಮಧ್ಯೆಪ್ರವೇಶಿಸುವ ಅಗತ್ಯವಿಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿಯವರು ಭಾನುವಾರ ಹೇಳಿದ್ದಾರೆ...

ಭಿನ್ನಾಭಿಪ್ರಾಯ ಶಮನಕ್ಕೆ ಹೊರಗಿನವರ ಮಧ್ಯಪ್ರವೇಶ ಅಗತ್ಯವಿಲ್ಲ: ಸತೀಶ್ ಜಾರಕಿಹೊಳಿ
ಶಾಸಕ ಸತೀಶ್ ಜಾರಕಿಹೊಳಿ
Published On :
ಅಥಣಿ: ಭಿನ್ನಾಭಿಪ್ರಾಯದ ವಿಷಯ ಕುರಿತಾದ ಸಂಧಾನಕ್ಕೆ ಹೊರಗಿನವರು ಮಧ್ಯೆಪ್ರವೇಶಿಸುವ ಅಗತ್ಯವಿಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿಯವರು ಭಾನುವಾರ ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಬಿಕ್ಕಟ್ಟು ಬಗೆಹರಿಸಲು ನನ್ನ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತನಾಡಿಲ್ಲ. ಅದಲ್ಲದೇ ರಾಜ್ಯ ಉಸ್ತುವಾರಿ ವೇಣುಗೋಪಲ ಸಹ ಮಾತನಾಡಿಲ್ಲ. ನಾನು ಬೆಂಗಳೂರಿಗೆ ಹೋಗಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ನಡೆದ ಯಾವುದೇ ಬೆಳವಣೆಗೆಗಳ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. 
ಸಮಸ್ಯೆ ಬಗೆಹರಿಸಲು ಹಿರಿಯ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ವಹಿಸಿರುವುದು ನನಗೆ ಗೊತ್ತಿಲ್ಲ. ಮಾಧ್ಯಮಗಳಿಂದ ಈ ಮಾಹಿತಿ ತಿಳಿದುಕೊಂಡೆ. ಅವರಿಗೆ ಜವಾಬ್ದಾರಿ ನೀಡಿರುವುದು ಒಳ್ಳೆಯದಾಯಿತು. ಅವರು ಜಿಲ್ಲೆಗೆ ಭೇಟಿ ನೀಡಿ ವಸ್ತುಸ್ಥಿತಿ ಅರಿಯಲಿ ಎಂದು ತಿಳಿಸಿದ್ದಾರೆ. 
ಪಕ್ಷ ತೊರೆಯುವ ಬೆದರಿಕೆಗಳನ್ನು ಹಾಕಿಲ್ಲ. ಪ್ರಸ್ತುತ ಎದುರಾಗಿರುವ ಭಿನ್ನಾಭಿಪ್ರಾಯಗಳನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ಈ ವಿಚಾರದಲ್ಲಿ ಹೊರಗಿನವರು ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.