ಸ್ಥಳೀಯ ಸಂಸ್ಥೆ ಫಲಿತಾಂಶ ಲೋಕಸಭೆ ಚುನಾವಣೆಗೆ ಟ್ರೆಂಡ್ ಸೆಟ್ಟರ್ ಅಲ್ಲ: ಯಡಿಯೂರಪ್ಪ
ನಿನ್ನೆ ಹೊರಬಿದ್ದ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಗೆ ಟ್ರೆಂಡ್ ಶೆಟ್ಟರ್ ಅಲ್ಲ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ...

Published On :
ಬೆಂಗಳೂರು: ನಿನ್ನೆ ಹೊರಬಿದ್ದ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಗೆ ಟ್ರೆಂಡ್ ಶೆಟ್ಟರ್ ಅಲ್ಲ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಹೀಗಿದ್ದರೂ ಕಾಂಗ್ರೆಸ್ ಪ್ರಬಲ ಸ್ಥಾನವಾಗಿರುವ ಹಳೇ ಮೈಸೂರು ಭಾಗದಲ್ಲಿ ಹಲವು ಕಡೆ ಬಿಜೆಪಿ ಗೆಲುವಿನ ನಗೆ ಬೀರಿದೆ, ಆದರೆ ಈ ಫಲಿತಾಂಶ ಲೋಕಸಭೆ ಚುನಾವಣೆಗೆ ಟ್ರೆಂಡ್ ಸೆಟ್ಟರ್ ಅಲ್ಲ ಎಂದು ಬಿಜೆಪಿ ಪ್ರತಿಪಾದಿಸಿದೆ.
ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳು ವಿಭಿನ್ನ ಎಂದು ಯಡಿಯೂರಪ್ಪ ಹೇಳಿದ್ದಾರೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಸುಮಾರು 22 ರಿಂದ 25 ಸ್ಥಾನ ಗೆಲ್ಲುವುದಾಗಿ ತಿಳಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವ ಬಗ್ಗೆ ಈಗಾಗಲೇ ಜನ ನಿರ್ಧರಿಸಿದ್ದಾರೆ, ಈ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದೆ, ಹಲವು ಭಾಗಗಳಲ್ಲಿ ಹೆಚ್ಚಿನ ಸ್ಥಾನ ಪಡೆದಿದ್ದೇವೆ, ಜನ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂಬುದು ಇದರಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.
ಅಧಿಕಾರದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ, ಹಣ ಮತ್ತು ಅಧಿಕಾರದ ದುರುಪಯೋಗದಿಂದ 2 ಪಕ್ಷಗಳು ಗೆಲುವು ಸಾಧಿಸಿವೆ ಎಂದು ಯಡಿಯಬರಪ್ಪ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿBS Yeddyurappaಬಿ.ಎಸ್ ಯಡಿಯೂರಪ್ಪಲೋಕಸಭೆ ಚುನಾವಣೆLok Sabha pollsKarnataka Local Body Electionಕರ್ನಾಟಕ ಸ್ಥ ಳೀಯ ಸಂಸ್ಥೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


