ರಾಜಕೀಯ

ಸರ್ಕಾರ ಉರುಳಿಸಲು ಐಟಿ ಜತೆ ಬಿಜೆಪಿ ಡೀಲ್: ಸಿಎಂ ಎಚ್ ಡಿಕೆ ಆರೋಪಕ್ಕೆ ಬಿಎಸ್ ವೈ ಕಿಡಿ

ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಸಂಚು ರೂಪಿಸಿದ್ದು, ಇದಕ್ಕಾಗಿ ಕೇಂದ್ರದ ತನಿಖಾ ಸಂಸ್ಥೆಗಳನ್ನು....

ಸರ್ಕಾರ ಉರುಳಿಸಲು ಐಟಿ ಜತೆ ಬಿಜೆಪಿ ಡೀಲ್: ಸಿಎಂ ಎಚ್ ಡಿಕೆ ಆರೋಪಕ್ಕೆ ಬಿಎಸ್ ವೈ ಕಿಡಿ
ಎಚ್ ಡಿ ಕುಮಾರಸ್ವಾಮಿ - ಬಿಎಸ್ ಯಡಿಯೂರಪ್ಪ
Published On :
ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಸಂಚು ರೂಪಿಸಿದ್ದು, ಇದಕ್ಕಾಗಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಇಂದು ನಗರದಲ್ಲಿ ಸಿಎಂ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ, ಮುಖ್ಯಮಂತ್ರಿಗಳು ಜವಾಬ್ದಾರಿ ಅರಿತು ಮಾತನಾಡಲಿ. ಯಾವ ಐಟಿ, ಯಾವ ಇಡಿ. ನಮಗೂ ಅದಕ್ಕೂ ಯಾವ ಸಂಬಂಧ ಎಂದು ಪ್ರಶ್ನಿಸಿದರು. ಅಲ್ಲದೆ ಜನತೆಯಲ್ಲಿ ಅನಗತ್ಯ ಗೊಂದಲ ಹುಟ್ಟಿಸಲು ಸಿಎಂ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಇನ್ನು ಬಿಎಸ್ ವೈ ಪುತ್ರ ವಿಜಯೇಂದ್ರ ಅವರು ಸಹ ಸಿಎಂ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಕುಮಾರಸ್ವಾಮಿ ಮಾಡಿರುವ ಆರೋಪ ಅವರ ಸ್ಥಾನಕ್ಕೂ ಗೌರವ ತರುವುದಿಲ್ಲ, ಬಾಲಿಷ ಹೇಳಿಕೆ. ಅಸ್ಥಿರ ಮನಸ್ಸಿನಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಬಿಜೆಪಿ ಕೇಂದ್ರದ ಸಂಸ್ಥೆಗಳನ್ನು ಬಳಸಿಕೊಂಡು ಸರ್ಕಾರ ಉರುಳಿಸಲು ಸಂಚು ರೂಪಿಸಿದೆ. ಇದಕ್ಕೆ ಸಾಕ್ಷಿಯಾಗಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಐಟಿ ಮುಖ್ಯಸ್ಥ ಬಾಲಕೃಷ್ಣ ಅವರನ್ನು ಭೇಟಿಯಾಗಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದರು.
ಇನ್ನು ಬಿಎಸ್ ವೈ ಹಾಗೂ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಯಡಿಯೂರಪ್ಪ ಅವರ ಪುತ್ರರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿರುವುದು ಸತ್ಯ. ಎಲ್ಲದಕ್ಕೂ ದಾಖಲೆ ನೀಡಲು ಸಾಧ್ಯವಿಲ್ಲ. ಸರಿಯಾದ ಮಾಹಿತಿ ಇಲ್ಲದೆ ನಾನು ಮಾತನಾಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.