ಸೆಪ್ಟಂಬರ್ ಮೂರನೇ ವಾರದಲ್ಲಿ ಸಂಪುಟ ವಿಸ್ತರಣೆ, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲ್ಲ: ದಿನೇಶ್
ಹಲವು ದಿನಗಳಿಂದ ಚರ್ಚೆಯಾಗುತ್ತಿರುವ ಸಂಪುಟ ವಿಸ್ತರಣೆ ಸೆಪ್ಟಂಬರ್ ಮೂರನೇ ವಾರದಲ್ಲಿ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ...

Published On :
ಬೆಂಗಳೂರು: ಹಲವು ದಿನಗಳಿಂದ ಚರ್ಚೆಯಾಗುತ್ತಿರುವ ಸಂಪುಟ ವಿಸ್ತರಣೆ ಸೆಪ್ಟಂಬರ್ ಮೂರನೇ ವಾರದಲ್ಲಿ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೈತ್ರಿ ಪಕ್ಷದ ನಿಯಮದಂತೆ ಸಚಿವ ಸ್ಥಾನ ಹಂಚಿಕೆಯಾಗಿದ್ದು, ಕಾಂಗ್ರೆಸ್ ನಿಂದ ಇನ್ನೂ ಆರು ಮಂದಿಗೆ ಸಚಿವರಾಗುವ ಅವಕಾಶವಿದ್ದು, ಮೂರನೇ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ. ಈ ಬಾರಿ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸುವುದಾಗಿ ರಾವ್ ಭರವಸೆ ನೀಡಿದ್ದಾರೆ.
ಬುಧವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಎಲ್ಲಾ ನಾಯಕರು ಒಗ್ಗಟ್ಟಾಗಿ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನು ಆಯಾ ಜಿಲ್ಲಾ ಮುಖಂಡರೇ ಬಗೆಹರಿಸಿಕೊಳ್ಳುತ್ತಾರೆ, ಪಕ್ಷದ ಹಿರಿಯ ನಾಯಕರು ಹಸ್ತಕ್ಷೇಪ ಮಾಡುವ ಅವಶ್ಯಕತೆಯಿಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ.
ಇನ್ನೂ ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಇಂದು ದಿನೇಶ್ ಗುಂಡೂರಾವ್ ದೆಹಲಿಗೆ ತೆರಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


