ರಾಜಕೀಯ

ಸಿದ್ದರಾಮಯ್ಯ ಯೂರೋಪ್ ಪ್ರವಾಸ ಕೈಗೊಂಡಿರುವ ವೇಳೆ ಕಾಂಗ್ರೆಸ್ ಶಾಸಕರಿಗೆ ಪರಮೇಶ್ವರ್ ಉಪಹಾರ ಕೂಟ!

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಸಚಿವರಿಗೆ ...

ಸಿದ್ದರಾಮಯ್ಯ ಯೂರೋಪ್ ಪ್ರವಾಸ ಕೈಗೊಂಡಿರುವ ವೇಳೆ ಕಾಂಗ್ರೆಸ್ ಶಾಸಕರಿಗೆ ಪರಮೇಶ್ವರ್ ಉಪಹಾರ ಕೂಟ!
ಜಿ.ಪರಮೇಶ್ವರ್
Published On :
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿದ್ದಾರೆ. 
ಏಪ್ರಿಲ್ 7 ರಂದು ಆಯೋಜಿಸಿರುವ  ಉಪಹಾರ ಕೂಟಕ್ಕೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ  ಕೂಡ ಭಾಗವಹಿಸುವ ಸಾದ್ಯತೆ ಇದೆ.
ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಪರಮೇಶ್ವರ್ ವಿರುದ್ಧ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ, ಶಾಸಕರನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. 
ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಯುರೋಪ್ ಪ್ರವಾಸದಲ್ಲಿರುವ
ವೇಳೆ ಪರಮೇಶ್ವರ್ , ಈ ಔತಣ ಕೂಟ ಆಯೋಜಿಸಿದ್ದಾರೆ.  ಜೆಡಿಎಸ್ ತಾಳಕ್ಕೆ ತಕ್ಕಂತೆ ಪರಮೇಶ್ವರ್ ಕುಣಿಯುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ,  ಈ ಉಪಹಾರ ಕೂಟದಲ್ಲಿ ಶಾಸಕರು ಹಾಗೂ ಪರಮೇಶ್ವರ್  ಪರಸ್ಪರ ಮಾತುಕತೆ  ನಡೆಸಲು ಅವಕಾಶ ಸಿಗುತ್ತದೆ ಎಂದು ಪಕ್ಷದ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.