ಡಿಸಿಎಂ ಹುದ್ದೆ ಕೊಡ್ತೀವಿ ಬಿಜೆಪಿಗೆ ಬನ್ನಿ: ರಮೇಶ್ ಜಾರಕಿಹೊಳಿಗೆ ಯತ್ನಾಳ್ ಆಹ್ವಾನ
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗೆ ಕದನ ನಡೆಸುತ್ತಿರುವ ಪೌರಾಡಳಿತ ಸಚಿವ ರಮೇಶ್ ಜಾರಕಿ ಹೊಳಿ ಅವರನ್ನು ಶಾಸಕ ಬಸನಗೌಡ ಪಾಟೀಲ್ ...

Published On :
ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗೆ ಕದನ ನಡೆಸುತ್ತಿರುವ ಪೌರಾಡಳಿತ ಸಚಿವ ರಮೇಶ್ ಜಾರಕಿ ಹೊಳಿ ಅವರನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಸೇರ್ಪಡೆಗೊಳ್ಳುವಂತೆ ಆಹ್ವಾನಿಸಿದ್ದಾರೆ.
ಬಿಜೆಪಿಗೆ ಬನ್ನಿ ನಿಮಗೆ ಉಪಮುಖ್ಯಮಂತ್ರಿ ಹುದ್ದೆ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ, ಇನ್ನೂ ಮಾಜಿ ಸಚಿವ ಎಂ.ಬಿ ಪಾಟೀಲ್ ಗೂ ಅಹ್ವಾನ ನೀಡಿದ್ದಾರೆ, ಬಿಜೆಪಿಗೆ ಬಂದರೆ ಸಚಿವ ಸ್ಥಾನ ನೀಡುವುದಾಗಿ ಯತ್ನಾಳ್ ಆಶ್ವಾಸನೆ ಕೊಟ್ಟಿದ್ದಾರೆ.
ಒಂದು ವೇಳೆ ನಿಮಗೆ ಮಂತ್ರಿ ಹುದ್ದೆ ಬೇಕೆಂದರೇ, ಬಿಜೆಪಿ ಬನ್ನಿ ಎಂದು ಆಹ್ವಾನಿಸಿದ್ದಾರೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮೊದಲು ಸ್ಪಷ್ಟನೆ ನೀಡಲಿ, ಅವರು ವಿದೇಶಕ್ಕೆ ಹೊಗಿರುವುದು ಪ್ರವಾಸಕ್ಕೋ ಅಥವಾ ಸರ್ಕಾರ ಉರುಳಿಸುವುದಕ್ಕೋ ಎಂಬ ಬಗ್ಗೆ ವಿವರಿಸಲಿ ಎಂದು ಯತ್ನಾಳ್ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಬಸನಗೌಡ ಪಾಟೀಲ್ ಯತ್ನಾಳ್ರಮೇಶ್ ಜಾರಕಿಹೊಳಿRamesh JarkiholiBasangouda patil yatnalJarkiholi Brothers-Hebbalkarಜಾರಕಿ ಹೊಳಿ ಬ್ರದರ್ಸ್- ಹೆಬ್ಬಾಳ್ಕರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


