ರಾಜಕೀಯ

ಐಟಿ ಮುಂದಿಟ್ಟುಕೊಂಡು ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ ಸುರೇಶ್ ಆರೋಪ

ಕರ್ನಾಟಕದಲ್ಲಿ ಬಿಜೆಪಿಗೆ ಸೆಡ್ಡು ಹೊಡೆದು ಸರ್ಕಾರ ರಚಿಸಿದ್ದೇವೆ. ಹಾಗಾಗಿ ಇಡಿ, ಐಟಿ ಬಳಸಿಕೊಂಡು ಸರ್ಕಾರ ಅಸ್ಥಿರಗೊಳಿಸಲು ರಾಜ್ಯ ಬಿಜೆಪಿ ನಾಯಕರು ಪ್ರಯತ್ನ ...

ಐಟಿ ಮುಂದಿಟ್ಟುಕೊಂಡು ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ ಸುರೇಶ್ ಆರೋಪ
ಡಿ,ಕೆ ಸುರೇಶ್
Published On :
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಗೆ ಸೆಡ್ಡು ಹೊಡೆದು ಸರ್ಕಾರ ರಚಿಸಿದ್ದೇವೆ. ಹಾಗಾಗಿ ಇಡಿ, ಐಟಿ ಬಳಸಿಕೊಂಡು ಸರ್ಕಾರ ಅಸ್ಥಿರಗೊಳಿಸಲು ರಾಜ್ಯ ಬಿಜೆಪಿ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್, ಸಮ್ಮಿಶ್ರ ಸರ್ಕಾರ ಉರುಳಿಸಿ ಬಿಜೆಪಿ ಅಧಿಕಾರಕ್ಕೆ ಬರಲು ವಾಮಮಾರ್ಗ ಹಾಗೂ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ದೂರಿದರು.
ಸಿಬಿಐ ಅಧಿಕಾರಿಗಳು ನಮ್ಮನ್ನ ಟಾರ್ಗೆಟ್ ಮಾಡ್ತಿದ್ದಾರೆ. ನನಗೂ ಕೂಡ ನೋಟೀಸ್ ಕೊಟ್ಟಿದ್ರು. ಕಳೆದ ಹತ್ತು ದಿನಗಳ ಹಿಂದೆ ನಾನು ಸಿಬಿಐ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ.
ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರಧಾನಿ ಗಮನಕ್ಕೆ ತರಲಿದ್ದೇನೆ. ಹಿಗಾಗಿ ಪ್ರಧಾನಿ ಭೇಟಿಯಾಗಿ ಅನುಮತಿ ಕೇಳಿದ್ದೇನೆ ಎಂದು ಡಿ.ಕೆ ಸುರೇಶ್ ಹೇಳಿದರು. 
ಕೇಂದ್ರ ಬಿಜೆಪಿ ಸರ್ಕಾರ ಐಟಿ, ಇಡಿ ಸಿಬಿಐಬಳಸಿಕೊಂಡು ರಾಜ್ಯ ಸರ್ಕಾರಕ್ಕೆ ಬೆಂಬಲವಾಗಿರುವವರನ್ನ ಬಂಧಿಸುವ ಪ್ರಯತ್ನ ನಡೆಸುತ್ತಿದೆ,. ಐಟಿ ಅಧಿಕಾರಿಗಳು 4 ಪ್ರಾಸಿಕ್ಯೂಷನ್ ಕೇಸನ್ನ ಡಿಕೆಶಿ ವಿರುದ್ದ ಹಾಕಿದ್ದಾರೆ. ಅದು ಪ್ರಯೋಜನ ಆಗದಿದ್ದಾಗ ಮತ್ತೊಂದು ರೀತಿಯ ಪ್ರಯತ್ನ ಆರಂಭಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮಿಷನ್ 25 ಮಾಡಲು ಇಂತಹ ಒತ್ತಡ ಅನುಸರಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.