ಬಿಜೆಪಿ ಕಾರ್ಯಕಾರಣಿ ಸಭೆಗೆ ಗೈರು: ದೆಹಲಿಯಿಂದ ದಿಢೀರ್ ವಾಪಸ್ಸಾದ ಬಿ.ಎಸ್.ಯಡಿಯೂರಪ್ಪ
ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಯೊಂದು ಕಂಡು ಬಂದಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹಠಾತ್ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ...

Published On :
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಯೊಂದು ಕಂಡು ಬಂದಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹಠಾತ್ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ. ಕಾರ್ಯಕಾರಣಿ ಸಭೆ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ರಾಜಧಾನಿ ದೆಹಲಿಗೆ ಭೇಟಿ ನಿನ್ನೆ ಸಂಜೆಯಷ್ಟೇ ತೆರಳಿದ್ದರು.
ದೆಹಲಿಗೆ ತೆರಳಿದ 12 ತಾಸಿನಲ್ಲಿಯೇ ಯಡಿಯೂರಪ್ಪ ಅವರು ಇದೀಗ ಬೆಂಗಳೂರಿಗೆ ಹಠಾತ್ ವಾಪಸ್ಸಾಗಿರುವುದು ಹಲವು ಅನುಮಾನ ಗಳಿಗೆ ಎಡೆಮಾಡಿಕೊಟ್ಟಿದೆ.
ಯಡಿಯೂರಪ್ಪ ಅವರ ಕುಟುಂಬದ ಮೂಲಗಳ ಪ್ರಕಾರ, ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡುವ ಸಲುವಾಗಿ ಯಡಿಯೂರಪ್ಪ ಅವರು ವಾಪಸ್ಸಾಗುತ್ತಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ತೊರೆಗು ವಾಪಸ್ಸಾಗಿರುವುದು ಕೇವಲ ಸ್ವಾಮೀಜಿ ಭೇಟಿ ಮಾತ್ರವಷ್ಟೇ ಅಲ್ಲ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಶೀಘ್ರದಲ್ಲಿಯೇ ಬದಲಾವಣೆಗಳಾಗಲಿದ್ದು, ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಬಿಜೆಪಿ ವರಿಷ್ಠರ ನಿರ್ದೇಶನದ ಮೇರೆಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengalurubjpಬಿಜೆಪಿದೆಹಲಿDelhiಯಡಿಯೂರಪ್ಪರಾಷ್ಟ್ರೀಯ ಕಾರ್ಯಕಾರಣಿ ಸಭೆNational Executive MeetBS.Yeddyurappa
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


