ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ದಿಢೀರ್ ವಾಪಸ್: ಕುಮಾರಸ್ವಾಮಿ ವ್ಯಂಗ್ಯ
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆಂದು ರಾಜಧಾನಿ ದೆಹಲಿಗೆ ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ದಿಢೀರ್ ಬೆಂಗಳೂರಿಗೆ ವಾಪಸ್ಸಾಗಿರುವುದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಎಂದು ಮುಖ್ಯಮಂತ್ರಿ...

Published On :
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆಂದು ರಾಜಧಾನಿ ದೆಹಲಿಗೆ ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ದಿಢೀರ್ ಬೆಂಗಳೂರಿಗೆ ವಾಪಸ್ಸಾಗಿರುವುದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವನ್ನು ಬದಲಿಸಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲು ತುರ್ತಾಗಿ ಬಂದಿದ್ದಾರೆಂದು ಹೇಳಿದ್ದಾರೆ.
ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ನಿಮಗೇ ಗೊತ್ತಿದೆ. ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ನಿರಂತರವಾಗಿ ಪ್ರಯತ್ನಗಳು ನಡೆಯುತ್ತಲೇ ಇವೆ ಎಂದು ತಿಳಿಸಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ. ಕಾರ್ಯಕಾರಣಿ ಸಭೆ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ರಾಜಧಾನಿ ದೆಹಲಿಗೆ ಭೇಟಿ ನಿನ್ನೆ ಸಂಜೆಯಷ್ಟೇ ತೆರಳಿದ್ದರು.
ದೆಹಲಿಗೆ ತೆರಳಿದ 12 ತಾಸಿನಲ್ಲಿಯೇ ಯಡಿಯೂರಪ್ಪ ಅವರು ಇದೀಗ ಬೆಂಗಳೂರಿಗೆ ಹಠಾತ್ ವಾಪಸ್ಸಾಗಿರುವುದು ಹಲವು ಅನುಮಾನ ಗಳಿಗೆ ಎಡೆಮಾಡಿಕೊಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruPoliticsರಾಜಕೀಯChief Ministerಮುಖ್ಯಮಂತ್ರಿYeddyurappaಯಡಿಯೂರಪ್ಪಹೆಚ್.ಡಿ.ಕುಮಾರಸ್ವಾಮಿHD. Kumaraswamy
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


