ಸರ್ಕಾರ ಕೆಡವಲು ನಾವು ಪ್ರಯತ್ನಿಸುತ್ತಿಲ್ಲ; ಬಿ ಎಸ್ ಯಡಿಯೂರಪ್ಪ
ಸರ್ಕಾರ ಕೆಡವಲು ನಾವು ಪ್ರಯತ್ನ ಮಾಡುತ್ತಿಲ್ಲ, ಸರ್ಕಾರ ಬಿದ್ದು ಹೋಗುವ ಭಯ ಇರುವುದು ...

ಬೆಂಗಳೂರು: ಸರ್ಕಾರ ಕೆಡವಲು ನಾವು ಪ್ರಯತ್ನ ಮಾಡುತ್ತಿಲ್ಲ, ಸರ್ಕಾರ ಬಿದ್ದು ಹೋಗುವ ಭಯ ಇರುವುದು ಕಾಂಗ್ರೆಸ್ ನವರಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, ಸರ್ಕಾರದ ವಿಷಯದಲ್ಲಿ ಬಿಜೆಪಿ ಮೂಗು ತೂರಿಸುವುದಿಲ್ಲ, ಅಂತಹ ಕೀಳುಮಟ್ಟದ ರಾಜಕೀಯ ಮಾಡುವುದಿಲ್ಲ. ಬಿಜೆಪಿ ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದರು.
ಬಿಜೆಪಿಯ ಕೇಂದ್ರ ತನಿಖಾ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿಲ್ಲ, ತನಿಖಾಧಿಕಾರಿಗಳನ್ನು ಸಂಪರ್ಕಿಸಿಯೂ ಇಲ್ಲ ಎಂದರು.
ಇನ್ನೊಂದೆಡೆ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಹತಾಶೆಯ ರಾಜಕಾರಣದಿಂದ ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ. ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ನ ಆಂತರಿಕ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದಿದ್ದಾರೆ.
ಸಚಿವ ಡಿ ಕೆ ಶಿವಕುಮಾರ್ ಮೇಲೆ ಕ್ರಮ ಕೈಗೊಳ್ಳಲು ರಾಜ್ಯದ ಬಿಜೆಪಿ ನಾಯಕರು ಪ್ರಧಾನಿಯವರ ಮೇಲಾಗಲಿ, ಕೇಂದ್ರ ತನಿಖಾ ಸಂಸ್ಥೆ ಮೇಲಾಗಲಿ ಒತ್ತಡ ತಂದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ಇಲ್ಲಿಗೆ ಕಿವಿ ಮೇಲೆ ಹೂ ಇಟ್ಟುಕೊಂಡು ಬಂದಿಲ್ಲ, 40 ವರ್ಷದಿಂದ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ ಎಂದು ಶೋಭಾ ಕರಂದ್ಲಾಜೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


