ರಾಜಕೀಯ

ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು- ಅದಕ್ಕೆ ನಾನು ಹೊಣೆಯಲ್ಲ: ಸತೀಶ್ ಜಾರಕಿಹೊಳಿ

ರಾಜ್ಯ ರಾಜಕೀಯದಲ್ಲಿ ಮುಂದಿನ 15 ದಿನಗಳಲ್ಲಿ ಏನು ಬೇಕಾದರೂ ಆಗಹಬಹುದು ಅದಕ್ಕೆ ನಾನು ಹೊಣೆಯಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ...

ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು- ಅದಕ್ಕೆ ನಾನು ಹೊಣೆಯಲ್ಲ: ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Published On :
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಂದಿನ 15 ದಿನಗಳಲ್ಲಿ ಏನು ಬೇಕಾದರೂ ಆಗಹಬಹುದು ಅದಕ್ಕೆ ನಾನು ಹೊಣೆಯಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಬಿಟ್ಟು, ಬಿಜೆಪಿ ಸೇರುವುದಿಲ್ಲ, ಇರುವ ಸಮಸ್ಯೆಗಳ ಬಗ್ಗೆ ಹೈಕಮಾಂಡ್ ಗೆ ತಿಳಿಸಿದ್ದೇವೆ, ಅವರೇ ಸಮಸ್ಯೆ ಬಗಹರಿಸುತ್ತಾರೆ ಎಂದು ಹೇಳಿದ್ದಾರೆ.
ವರಿಷ್ಟರು ಬೆಳಗಾವಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು, ರಾಜ್ಯ ನಾಯಕರು ಹಾಗೂ ಹೈಕಮಾಂಡ್ ಈ ಸಮಸ್ಯೆ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ.
ಶ್ರೀರಾಮುಲು ಜೊತೆ ನಿರಂತರ ಸ್ ನಿರಂತರ ಸಂಪರ್ಕದಲ್ಲಿದ್ದೀರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾರೋಂದಿಗೂ ಮಾತನಾಡಿಲ್ಲ ಎಂದರು.
ರಮೇಶ್ ಜಾರಕಿಹೊಳಿ ಜೊತೆ 14 ಮಂದಿ ಶಾಸಕರು ಇದ್ದಾರಲ್ಲಿ ಎಂಬ ಪ್ರಶ್ನೆಗ ಉತ್ತರಿಸಿದ ಅವರು, ಸರ್ಕಾರ ರಚನೆಯಾದಾಗಿನಿಂದ ಅವರ ಜೊತೆಗಿದ್ದಾರೆ ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ವಿರುದ್ಧ ಅಸಮಾಧಾನಕ್ಕೆ ಕಾರಣವಿದೆ, ಅವರು ಜಿಲ್ಲೆಯ ರಾಜಕೀಯ ಮತ್ತು ವರ್ಗಾವಣೆ ವಿಷಯದಲ್ಲಿ ಹಸ್ತಕ್ಷೇಪ ಮಾಡಿದ್ದರು ಹೀಗಾಗಿ ಅವರ ವಿರುದ್ದ ಕೋಪವಿದೆ ಎಂದು ಹೇಳಿದ್ದಾರೆ, 
ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರವಾಗಿ ಜಾರಕಿಹೊಳಿ ಸಹೋದರರಿಗೆ ಪಕ್ಷದಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ರಮೇಶ್​ ಜಾರಕಿಹೊಳಿ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.