ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಅಪೇಕ್ಷೆಯಿಂದ ತೀವ್ರತರ ಬಿಕ್ಕಟ್ಟು ?
ಬೆಳಗಾವಿಯ ಜಾರಕಿಹೊಳಿ ಸಹೋದರರು ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಅವರ ನಡುವಿನ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉಂಟಾಗಿದೆ ಎಂದು ಎಸಿಸಿಸಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ಬೆಳಗಾವಿಯ ಜಾರಕಿಹೊಳಿ ಸಹೋದರರು ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಅವರ ನಡುವಿನ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉಂಟಾಗಿದೆ ಎಂದು ಎಸಿಸಿಸಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಬೆಳಗಾವಿ ರಾಜಕೀಯದಲ್ಲಿ ಡಿ. ಕೆ. ಶಿವಕುಮಾರ್ ತನ್ನ ಪ್ರಭಾವ ಬೀರಲು ಪ್ರಯತ್ನಿಸಿದದ್ದು, ರಾಜ್ಯಸರ್ಕಾರಕ್ಕೆ ಮುಳುವಾಗಿ ಪರಿಣಮಿಸಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಡಿ. ಕೆ. ಶಿವಕುಮಾರ್ ರಾಜಕೀಯ ಹಸ್ತಕ್ಷೇಪ ಕುರಿತ ಭಿನ್ನಾಭಿಪ್ರಾಯ ಈಗ ಬೆಳಗಾವಿಯಿಂದ ಬಳ್ಳಾರಿಯಲ್ಲೂ ವ್ಯಾಪಿಸಿದೆ. ಅಲ್ಲಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಸ್ಥಳೀಯ ವಿಚಾರಗಳಲ್ಲಿ ಡಿ. ಕೆ. ಶಿವಕುಮಾರ್ ಪ್ರಾಬಲ್ಯವನ್ನು ಜಿಲ್ಲೆಯ ಶಾಸಕರು ಸಹಿಸುತ್ತಿಲ್ಲ ಎಂಬುದು ತಿಳಿದುಬಂದಿದೆ.
ಅಲ್ಲದೇ ಡಿ. ಕೆ. ಶಿವಕುಮಾರ್ ಉತ್ತರ ಕರ್ನಾಟಕ ಭಾಗದ ಬಹುತೇಕ ನೀರಾವರಿ ಯೋಜನೆಗಳ ಉಸ್ತುವಾರಿ ವಹಿಸಿದ್ದು, ಮುಖ್ಯಮಂತ್ರಿ ಅಪೇಕ್ಷೆಯಿಂದಾಗಿ ರಾಜ್ಯಾದ್ಯಂತ ತನ್ನ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


