ರಾಜಕೀಯ

ವಿದೇಶ ಪ್ರವಾಸದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಾಪಸ್, ಇಂದು ಕಾಂಗ್ರೆಸ್ ನ ಮಹತ್ವದ ಸಭೆ

12 ದಿನಗಳ ವಿದೇಶ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸ್ವದೇಶಕ್ಕೆ ವಾಪಸ್ಸಾಗಿದ್ದು, ಅವರು ಬೆಳಗಾವಿ ರಾಜಕೀಯ ವಲಯದಲ್ಲಿ ....

ವಿದೇಶ ಪ್ರವಾಸದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಾಪಸ್, ಇಂದು ಕಾಂಗ್ರೆಸ್ ನ ಮಹತ್ವದ ಸಭೆ
ಮಾಜಿ ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: 12 ದಿನಗಳ ವಿದೇಶ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸ್ವದೇಶಕ್ಕೆ ವಾಪಸ್ಸಾಗಿದ್ದು, ಅವರು ಬೆಳಗಾವಿ ರಾಜಕೀಯ ವಲಯದಲ್ಲಿ ಭುಗಿಲೆದ್ದಿರುವ ಅಸಮಾಧಾನವನ್ನು ಬಗೆಹರಿಸುವ ಸಾಧ್ಯತೆಯಿದೆ. ಇವರ ಆಗಮನದಿಂದ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಮತ್ತೆ ಗರಿಗೆದರಲಿವೆ.

ಸಮ್ಮಿಶ್ರ ಸರ್ಕಾರದ ಮೈತ್ರಿಗೆ ಕಗ್ಗಂಟಾಗಿರುವ ಬೆಳಗಾವಿಯ ಜಾರಕಿಹೊಳಿ ಬ್ರದರ್ಸ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬಣಗಳ ನಡುವಿನ ಭಿನ್ನಮತವನ್ನು ಬಗೆಹರಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರು ಪರಿಹಾರ ನೀಡಬಹುದು ಎಂದು ಎಲ್ಲರ ಚಿತ್ತ ಇದೀಗ ಅವರತ್ತ ನೆಟ್ಟಿದೆ.

ಬೆಳಗಾವಿ ರಾಜಕೀಯದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದ ನಂತರ ಇಂದು ಮೊದಲ ಬಾರಿಗೆ ಸಿದ್ದರಾಮಯ್ಯನವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಸಿದ್ದರಾಮಯ್ಯನವರು ಈ ಅವಕಾಶವನ್ನು ಪಕ್ಷದಲ್ಲಿ ತಮ್ಮ ನಾಯಕತ್ವವನ್ನು ಇನ್ನಷ್ಟು ಗಟ್ಟಿಗೊಳಿಸಲು ನೋಡುವ ಸಾಧ್ಯತೆಯಿದೆ.

ಸಿದ್ದರಾಮಯ್ಯನವರ ಬಣದ ಅನುಯಾಯಿಗಳೆಂದು ಗುರುತಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸಿದ್ದರಾಮಯ್ಯನವರೊಂದಿಗೆ ನಡೆಸುವ ಇಂದಿನ ಸಭೆ ಅತ್ಯಂತ ಪ್ರಮುಖವಾಗಿರುತ್ತದೆ. ಬೆಳಗಾವಿಯ ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕು ಚುನಾವಣೆಯಲ್ಲಿ ಸೋಲು ಕಂಡ ನಂತರ ಜಾರಕಿಹೊಳಿ ಬ್ರದರ್ಸ್ ಗೆ ಅಸಂತುಷ್ಟರಾಗಿದ್ದಾರೆ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಾಗಿದೆ.

ಇಂದು ಸಿದ್ದರಾಮಯ್ಯನವರು ಜಾರಕಿಹೊಳಿ ಸೋದರರು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರನ್ನು ಮೊದಲಿಗೆ ಭೇಟಿ ಮಾಡುವ ಸಾಧ್ಯತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.