ರಾಜಕೀಯ

ಕೈ ಒಳಜಗಳಕ್ಕೂ ನಮಗೂ ಸಂಬಂಧವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಕಾಂಗ್ರೆಸ್ ಒಳಜಗಳಕ್ಕೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ...

ಕೈ ಒಳಜಗಳಕ್ಕೂ ನಮಗೂ ಸಂಬಂಧವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ
ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
Published On :
ಹಾಸನ: ಕಾಂಗ್ರೆಸ್ ಒಳಜಗಳಕ್ಕೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ. 
ಹಾಸನ ಜಿಲ್ಲೆ ಅರಸೀಕರೆ ಹಾಗೂ ತುಮಕುರಿನ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸಹೋದರರು ಆ್ಯಂಡ್ ಟೀಮ್ ರಾಜೀನಾಮೆ ಕೊಡುವ ವಿಚಾರಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. 
ಜಾರಕಿಹೊಳಿ ಸಹೋದರರ ಟೀಂ ಬಿಜೆಪಿ ಸೇರ್ಪಡೆ ವಿಚಾರವಾಗಿ ನಾನು ಇದೂವರೆಗೂ ಒಂದೇ ಒಂದು ಮಾತನ್ನೂ ಆಡಿಲ್ಲ. ಬಿಜೆಪಿ ಆಪರೇಷನ್ ಕಮಲವನ್ನು ನಡೆಸುತ್ತಿಲ್ಲ. ರಾಜ್ಯದ ಜನ ಬಿಜೆಪಿಗೆ 104 ಸ್ಥಾನ ನೀಡುವ ಮೂಲಕ ಆಶೀರ್ವದಿಸಿದ್ದಾರೆ. ನಾವು ಪ್ರತಿಪಕ್ಷವಾಗಿಯೇ ಕೆಲಸ ಮಾಡುತ್ತೇವೆ. ಸರ್ಕಾರ ಬೀಳಿಸುವ ಯಾವುದೇ ರೀತಿಯ ಕೆಲಸಕ್ಕೆ ನಾವು ಕೈಹಾಕಿಲ್ಲ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಒಳ ಜಗಳವನ್ನು ಶಮನ ಮಾಡುವ ಕಾರ್ಯದಲ್ಲೇ ತಲ್ಲೀನರಾಗಿರುವ ಸಮ್ಮಿಶ್ರ ಸರ್ಕಾರದ ನಾಯಕರು ಇನ್ನು ಮುಂದೆಯಾದರೂ ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಲಿ. ರೈತರು, ಬಡವರ ಹಿತ ಕಾಪಾಡುವ ಕಾರ್ಯಕ್ರಮಗಳನ್ನು ಜಾರಿಗೊಳಿಸಲಿ ಎಂದು ಇದೇ ವೇಳೆ ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.