ದಾಖಲೆ ಇದ್ದರೆ ಬಿಡುಗಡೆ ಮಾಡಿ: ಸಿಎಂಗೆ 48 ಗಂಟೆಗಳ ಗಡುವು ನೀಡಿದ ಸೋಮಶೇಖರ್
ತಮ್ಮ ವಿರುದ್ಧ ಗಂಭೀರ ಆರೋಪ ಮಾಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಬಳಿ ದಾಖಲೆಗಳಿದ್ದರೆ 48 ಗಂಟೆಗಳೊಳಗಾಗಿ ಬಿಡುಗಡೆ ಮಾಡಲಿ ಎಂದು ಸಕಲೇಶಪುರದ ಪರಾಜಿತ ಬಿಜೆಪಿ ಅಭ್ಯರ್ಥಿ ನಾರ್ವೇ ಸೋಮಶೇಖರ್...

Published On :
ಅರಸೀಕೆರೆ: ತಮ್ಮ ವಿರುದ್ಧ ಗಂಭೀರ ಆರೋಪ ಮಾಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಬಳಿ ದಾಖಲೆಗಳಿದ್ದರೆ 48 ಗಂಟೆಗಳೊಳಗಾಗಿ ಬಿಡುಗಡೆ ಮಾಡಲಿ ಎಂದು ಸಕಲೇಶಪುರದ ಪರಾಜಿತ ಬಿಜೆಪಿ ಅಭ್ಯರ್ಥಿ ನಾರ್ವೇ ಸೋಮಶೇಖರ್ ಅವರು ಭಾನುವಾರ ಸವಾಲು ಹಾಕಿದ್ದಾರೆ.
ಅರಸೀಕೆರೆಯಲ್ಲಿ ಭಾನುವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಆಪರೇಷನ್ ಕಮಲಕ್ಕೆ ಕೈ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಎಂ ಕುಮಾರಸ್ವಾಮಿ ಬಳಿಯೇ ಗುಪ್ತಚರ ಇಲಾಖೆ ಸೇರಿ ಎಲ್ಲಾ ರೀತಿಯ ಅಧಿಕಾರ ಇದೆ. ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಲಿ. ನಾನು ಹಣದ ಆಮಿಷವೊಡ್ಡಿ ಆಪರೇಷನ್ ಕಮಲಕ್ಕೆ ಕೈ ಹಾಕಿಲ್ಲ ಎಂದು ತಿಳಿಸಿದರು.
ನನ್ನ ಹೆಸರು ಜಿಮ್ ಸೋಮ ಅಲ್ಲ. ಸೋಮಶೇಖರ್ ಜಯರಾಮ್ ಎಂದು ತಿಳಿಸಿದ ಸೋಮಶೇಖರ್, ನಾನು ಅಕ್ರಮ ದಂಧೆಯಲ್ಲಿ ತೊಡಗಿರುವುದು, ಆ ಹಣದಿಂದ ಆಪರೇಷನ್ ಕಮಲಕ್ಕೆ ಮುಂದಾಗಿರುವ ಬಗ್ಗೆ ದಾಖಲಿಸಿದ್ದರೆ ಕುಮಾರಸ್ವಾಮಿಯವರು ಮುಂದಿನ 48 ಗಂಟೆಗಳೊಳಗಾಗಿ ಬಿಡುಗಡೆ ಮಾಡಲಿ. ನನ್ನ ಮೇಲೆ ಆರೋಪ ಸಾಬೀತಾದರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ಅಷ್ಟೇ ಅಲ್ಲ. ನನ್ನ ಎಲ್ಲಾ ಆಸ್ತಿಯನ್ನು ಕೊಡಗು ನೆರೆ ಸಂತ್ರಸ್ತರಿಗೆ ಕೊಡುವೆ ಎಂದು ಸವಾಲು ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


