ದೇವೇಗೌಡ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ: ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ತಂದ ಎ.ಮಂಜು!
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿರುವ ಮಾಜಿ ಸಚಿವ ಎ ಮಂಜು ತನಿಖೆ ನಡೆಸುವಂತೆ ಒತ್ತಾಯಿಸಿ ....

Published On :
ಹಾಸನ/ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿರುವ ಮಾಜಿ ಸಚಿವ ಎ ಮಂಜು ತನಿಖೆ ನಡೆಸುವಂತೆ ಒತ್ತಾಯಿಸಿ ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದಾರೆ,
ಹಾಸನ ತಾಲೂಕಿನ ದುದ್ದ ಹೋಬಳಿಯ ಗೌರಿ ಪುರದ ಸೋಮನಹಳ್ಳಿ ಗ್ರಾಮದಲ್ಲಿ ದೇವೇಗೌಡರ ಕುಟುಂಬ 54.29 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿದ್ದಾರೆ ಎಂದು ಆರೋಪಿಸಿದ್ದಾರೆ
2014 ಸೆಪ್ಟಂಬರ್ 19 ರಂದು ದೇವೇಗೌಡರ ಅತ್ತೆ ಕಾಳಮ್ಮ ಹಾಗೂ ಮೊಮ್ಮಗ ಪ್ರಜ್ವಲ್ ರೇವಣ್ಣ ಹೆಸರಿಗೆ ವರ್ಗಾಯಿಸಲಾಗಿದೆ ಎಂದು ಮಂಜು ಮಾಹಿತಿ ನೀಡಿದ್ದಾರೆ.
ಈ ಅವ್ಯವಹಾರಕ್ಕೆ ರೇವಣ್ಣ ತಮ್ಮ ರಾಜಕೀಯ ಪ್ರಭಾಲ ಬಳಸಿದ್ದಾರೆ, ಕಂದಾಯ ಇಲಾಖೆ ಅಧಿಕಾರಿಗಳು ಸಹ ಕೈ ಜೋಡಿಸಿದ್ದಾರೆ ಎಂದು ಮಂಜು ದೂರಿದ್ದಾರೆ.ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಕಂದಾಯ ಸಚಿವರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
15 -20 ದಿನಗಳಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇನ್ನೂ ಮಂಜು ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ಎಚ್.ಡಿ ರೇವಣ್ಣ, ಅವರ ಆರೋಪಗಳೆಲ್ಲಾ ನಿರಾಧಾರ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


