ಜಾರಕಿಹೊಳಿ ಸಮಾಧಾನ ಪಡಿಸಲು ಕಾಂಗ್ರೆಸ್ ನಿಂದ ಪ್ರಮುಖ ಹುದ್ದೆ ಆಮಿಷ?
ರಾಜ್ಯ ರಾಜಕೀಯದಲ್ಲಿ ಜಾರಕಿಹೊಳಿ ಸಹೋದರರು ಸೃಷ್ಟಿಸಿರುವ ಬಿಕ್ಕಟ್ಟು ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ....

Published On :
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಜಾರಕಿಹೊಳಿ ಸಹೋದರರು ಸೃಷ್ಟಿಸಿರುವ ಬಿಕ್ಕಟ್ಟು ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದಿರುವ ರಾಹುಲ್ ಗಾಂಧಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ದೆಹಲಿಗೆ ಕರೆದಿದ್ದಾರೆ.
ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರು ತಮ್ಮ ಬೇಡಿಕೆಗಳನ್ನು ಪೂರ್ಣಗೊಳಿಸಿದರೇ ಎಐಸಿಸಿ ಆದೇಶವನ್ನು ಪಾಲಿಸುವುದಾಗಿ ಮೂಲಗಳು ತಿಳಿಸಿವೆ, ಜಾರಕಿಹೊಳಿ ಸಹೋದರರು ಮತ್ತು ಅವರ ಬೆಂಬಲಿತ ಶಾಸಕರಿಗೆ ಸೂಕ್ತ ಸ್ಥಾನ ಮಾನ ನೀಡುವುದು ಜಾರಕಿಹೊಳಿ ಸಹೋದರರ ಪ್ರಮುಖ ಬೇಡಿಕೆಯಾಗಿದೆ.
ಒಂದೇ ಜಿಲ್ಲೆಗೆ ಸೇರಿದ ಇಬ್ಬರಿಗೆ ಸಂಪುಟದಲ್ಲಿ ಸ್ಥಾನಮಾನ ನೀಡುವುದು ಸಾಧ್ಯವಿಲ್ಲ ಎಂಬುದು ಹೈಕಮಾಂಡ್ ವಾದ. ಆದರೆ ಸತೀಶ್ ಅವರಿಗೆ ಪ್ರಮುಖ ಸ್ಥಾನ ನೀಡಲು ಹೈಕಮಾಂಡ್ ಮುಂದಗಾಲಿದೆ,
ಈ ಎಲ್ಲಾ ಬಿಕ್ಕಟ್ಟನ್ನು ಪರಿಹರಿಸಿ ಒಂದು ಅಂತ್ಯ ಹಾಡಲು ಹೈಕಮಾಂಡ್ ನಿರ್ಧರಿಸಿದೆ. ಇಷ್ಟವಿಲ್ಲದಿದ್ದರೂ ಸೋಮವಾರ ಜಾರಕಿಹೊಳಿ ಸಹೋದರರು ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದರು., ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಮ್ಮ ಮನೆಯಲ್ಲಿ ನಡೆಸಿದ ಮಾತುಕತೆ ಕೂಡ ವಿಫಲವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸತೀಶ್ ಜಾರಕಿಹೊಳಿRamesh jarakiholiರಮೇಶ್ ಜಾರಕಿಹೊಳಿKarnataka politicsಕರ್ನಾಟಕ ರಾಜಕೀಯsathish Jarakiholiplum post
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


