ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ರಕ್ಷಕ: ಅವರ ಬೆಂಬಲದೊಂದಿಗೆ 5 ವರ್ಷ ಪೂರ್ಣ: ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ರಕ್ಷಕರು. ಅವರ ಸಹಕಾರ-ಬೆಂಬಲದೊಂದಿಗೆ ಸರ್ಕಾರ...

Published On :
ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಲವರು ವಿಲನ್ ತರ ಬಿಂಬಿಸುತ್ತಿದ್ದಾರೆ, ಆದರೆ ಸಿದ್ದರಾಮಯ್ಯ ಅವರೇ ಸಮ್ಮಿಶ್ರ ಸರ್ಕಾರದ ರಕ್ಷಕರು. ಅವರ ಸಹಕಾರ-ಬೆಂಬಲದೊಂದಿಗೆ ಸರ್ಕಾರ ಐದು ವರ್ಷ ಮುನ್ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಸುಭದ್ರವಾಗಲು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಪಾತ್ರ ದೊಡ್ಡದಿದೆ. ಸ್ವತಃ ಅವರೇ ಸರ್ಕಾರದ ರಕ್ಷಕರಾಗಿದ್ದಾರೆ. ಹೀಗಿದ್ದರೂ ಪ್ರಸಕ್ತ ರಾಜಕೀಯ ಬೆಳವಣಿಗೆಯಲ್ಲಿ ಅನಾವಶ್ಯಕವಾಗಿ ಅವರ ಹೆಸರು ಎಳೆಯಲಾಗುತ್ತಿದೆ ಎಂದರು.
ಸರ್ಕಾರವನ್ನು ಅಸ್ಥಿರಗೊಳಿಸಲು ಯಾರು ಯತ್ನಿಸುತ್ತಿದ್ದಾರೆ ಎಂಬುದು ನಾಡಿಗೆ ಗೊತ್ತಿದೆ. ಬಿಜೆಪಿ ಈ ನಿಟ್ಟಿನಲ್ಲಿ ವ್ಯರ್ಥ ಕಸರತ್ತು ಮಾಡುತ್ತಿದೆ. ಆದರೆ ಸರ್ಕಾರ ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬುದು ಗೊತ್ತಿದೆ. ಅಕ್ಟೋಬರ್ 2 ರೊಳಗೆ ಸಮ್ಮಿಶ್ರ ಸರ್ಕಾರ ಬೀಳುತ್ತದೆ ಎಂದು ಕೆಲವು ಮಾಧ್ಯಮಗಳಲ್ಲಿ ಹೈಲೈಟ್ ಮಾಡಲಾಗುತ್ತಿದೆ, ನಂತರ ದಸರಾವರೆಗೆ ಅವರು ಡೆಡ್ ಲೈನ್ ವಿಸ್ತರಿಸುತ್ತಾರೆ ಎಂಬುದು ನನದೆ ತಿಳಿದಿದೆ ಎಂದು ಹೇಳಿದ್ದಾರೆ,.
ಸಚಿವ ರಮೇಶ ಜಾರಕಿಹೊಳಿ ನಿರಂತರವಾಗಿ ತಮ್ಮ ಸಂಪರ್ಕದಲ್ಲಿದ್ದಾರೆ, ಅವರು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KumaraswamySiddaramaiahಸಿದ್ದರಾಮಯ್ಯಸಮ್ಮಿಶ್ರ ಸರ್ಕಾರcoalition governmentಎಚ್.ಡಿ ಕುಮಾರ ಸ್ವಾಮಿKarnataka politicsಕರ್ನಾಟಕ ರಾಜಕೀಯprotectorರಕ್ಷಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


