ಹವಾಲಾ ದಂಧೆಯಲ್ಲಿ ಭಾಗಿಯಾಗಿಲ್ಲ, ಹೆದರಿ ಏಲ್ಲಿಯೂ ಓಡಿ ಹೋಗಲ್ಲ: ಡಿಕೆ ಶಿವಕುಮಾರ್
2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತಮ್ಮ ವಿರುದ್ಧ ಷಡ್ಯಂತ್ರ ರೂಪಿಸಿದ್ದು, ಜಾರಿ ನಿರ್ದೇಶನಾಲಯದಲ್ಲಿ ಪ್ರಕರಣ ದಾಖಲಿಸಲು ಪ್ರಯತ್ನಸುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ...

Published On :
ಬೆಂಗಳೂರು: 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತಮ್ಮ ವಿರುದ್ಧ ಷಡ್ಯಂತ್ರ ರೂಪಿಸಿದ್ದು, ಜಾರಿ ನಿರ್ದೇಶನಾಲಯದಲ್ಲಿ ಪ್ರಕರಣ ದಾಖಲಿಸಲು ಪ್ರಯತ್ನಸುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಜಾರಿ ನಿರ್ದೇಶನಾಲಯದಲ್ಲಿ ತಮ್ಮ ವಿರುದ್ದದ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಡಿ. ಕೆ. ಶಿವಕುಮಾರ್ , ಆಹಾರದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಏಲ್ಲಿಯೂ ಓಡಿ ಹೋಗಿಲ್ಲ. ಜಾರಿ ನಿರ್ದೇಶನಾಲಯದಿಂದ ನಾನು ಯಾವುದೇ ನೋಟಿಸ್ ಪಡೆದಿಲ್ಲ. ಕಾನೂನು ಗೌರವಿಸುವ ನಾಗರಿಕನಾಗಿದ್ದು, ಯಾವಾಗಲೂ ತನಿಖಾ ಸಂಸ್ಥೆಗಳೊಂದಿಗೆ ಸಹಕರಿಸಿದ್ದೇನೆ. ಯಾವುದೇ ರೀತಿಯ ಪರಿಣಾಮಗಳನ್ನು ಎದುರಿಸಲು ತಾನೂ ಸಿದ್ದವಿರುವುದಾಗಿ ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.ಕಾಂಗ್ರೆಸ್ ಪಕ್ಷದ ವರ್ಚಸ್ಸು ಹಾಳು ಮಾಡಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಡಿ. ಕೆ. ಶಿವಕುಮಾರ್, ಬಿಜೆಪಿ ಸರ್ಕಾರ ರಚನೆ ಕನಸಿನ ಮಾತು ಎಂದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.ಕಾಂಗ್ರೆಸ್ ಪಕ್ಷದ ವರ್ಚಸ್ಸು ಹಾಳು ಮಾಡಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಡಿ. ಕೆ. ಶಿವಕುಮಾರ್, ಬಿಜೆಪಿ ಸರ್ಕಾರ ರಚನೆ ಕನಸಿನ ಮಾತು ಎಂದರು.
ನಾನು ಯಾರನ್ನು ಕೊಲೆ ಮಾಡಿಲ್ಲ, ಯಾವುದೇ ಅಪರಾಧ ಮಾಡಿಲ್ಲ, ಹವಾಲ ದಂಧೆಯಲ್ಲಿ ಭಾಗಿಯಾಗಿಲ್ಲ. ಇಡಿ ಏಕೆ ಬಂಧಿಸುತ್ತದೆ ಎಂದು ಪ್ರಶ್ನಿಸಿದ ಡಿ. ಕೆ. ಶಿವಕುಮಾರ್, ಪರೋಕ್ಷವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಿಜೆಪಿ ಸ್ವಾಯತ್ತ ಸಂಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ. ನಾನು ಯಾವುದಕ್ಕೂ ಬಗ್ಗುವುದಿಲ್ಲ, ಎಲ್ಲಿಯೂ ಓಡಿ ಹೋಗುವ ಹೇಡಿಯಲ್ಲ. ಸೂಕ್ತ ಸಮಯದಲ್ಲಿ ದೇಶದ ಜನತೆಗೆ ಎಲ್ಲ ವಿಷಯವನ್ನು ಬಹಿರಂಗಪಡಿಸುವುದಾಗಿ ಹೇಳಿದರು.ದಾಳಿ ಸಂದರ್ಭದಲ್ಲಿ ದೊರೆತ 41 ಲಕ್ಷ ರೂ. ಗೆ ಸೂಕ್ತ ದಾಖಲೆ ನೀಡುವುದಾಗಿ ಹೇಳಿದರು.
ಇದಕ್ಕೂ ಮುನ್ನ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಸಂದೀಪ್ ಪಾತ್ರ, ಹವಾಲಾ ದಂಧೆ, ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಪ್ರಮುಖ ಆಧಾರವಾಗಿದ್ದು, ಡಿ. ಕೆ. ಶಿವಕುಮಾರ್ ಎಷ್ಟು ಹಣವನ್ನು ಎಐಸಿಸಿಗೆ ಪಾವತಿಸಿದ್ದಾರೆ ಎಂಬ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಹೇಳಿದ್ದಾರೆ. ನೋಟು ಅಮಾನ್ಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಏಕೆ ಕಣ್ಣೀರು ಹಾಕುತಿತ್ತು ಎಂದು ಟೀಕಿಸಿದ್ದರು.
2017 ಆಗಸ್ಟ್ ತಿಂಗಳಲ್ಲಿ ಡಿ. ಕೆ. ಶಿವಕುಮಾರ್ ಹಾಗೂ ಅವರ ಆಪ್ತರ ಮನೆ ದಾಳಿ ಹಾಗೂಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಹಾಗೂ ಆವರ ಆಪ್ತ ಹಾಗೂ ಇಬ್ಬರು ಸರ್ಕಾರಿ ನೌಕರರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


