ರಾಜಕೀಯ

ದೇವೇಗೌಡ ಕುಟುಂಬದ ಹಗರಣಗಳ ದಾಖಲೆ ಬಿಡುಗಡೆ ಮಾಡುವೆ: ಬಿಎಸ್ ವೈ

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಕುಟುಂಬದ ಹಗರಣಗಳ ದಾಖಲೆ ಬಿಡುಗಡೆ...

ದೇವೇಗೌಡ ಕುಟುಂಬದ ಹಗರಣಗಳ ದಾಖಲೆ ಬಿಡುಗಡೆ ಮಾಡುವೆ: ಬಿಎಸ್ ವೈ
ಬಿಎಸ್ ಯಡಿಯೂರಪ್ಪ
Published On :
ಬೆಂಗಳೂರು: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಕುಟುಂಬದ ಹಗರಣಗಳ ದಾಖಲೆ ಬಿಡುಗಡೆ ಮಾಡುವುದಾಗಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಇಂದು ಸಂಜೆ ನಾನು ದೇವೇಗೌಡರ ಕುಟುಂಬದ ಹಗರಣಗಳ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ. ಈ ಅಕ್ರಮಗಳ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ನೀಡಲಿ. ಕುಮಾರಸ್ವಾಮಿ ವಿರುದ್ಧವೂ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣಗಳಿವೆ ಎಂದು ಬಿಎಸ್ ವೈ ವಾಗ್ದಾಳಿ ನಡೆಸಿದರು.
ನಿಮಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ನಿಮ್ಮ ಅಧಿಕಾರ ಶಾಶ್ವತ ಅಲ್ಲ ಎಂದ ಮಾಜಿ ಸಿಎಂ, ಕುಮಾರಸ್ವಾಮಿ ಅವರೇ ಸೇಡಿನ ರಾಜಕಾರಣ ಮಾಡುವುದು ಬೇಡ. ಕೇಂದ್ರದಲ್ಲಿ ಮೋದಿ ಸರ್ಕಾರ ಇದೆ. ನಿಮಗೆ ಪ್ರತಿಯಾಗಿ ಏನು ಮಾಡಬೇಕು ಎಂಬುದು ನಮಗೆ ಗೊತ್ತಿದೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ನಾಯಕರು ಇಂದು ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ, ದೇವೇಗೌಡ ಕುಟುಂಬದ ಭೂ ಹಗರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಬಿಎಸ್ ವೈ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.