ರಾಜಕೀಯ

ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ :ವಿಶೇಷತೆ ಏನೂ ಇಲ್ಲ- ಹೆಚ್ ಡಿ ದೇವೇಗೌಡ

ಹಾಸನದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಹ ವಿಶೇಷತೆ ಏನೂ ಇಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.

ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ :ವಿಶೇಷತೆ ಏನೂ ಇಲ್ಲ- ಹೆಚ್ ಡಿ ದೇವೇಗೌಡ
ಹೆಚ್. ಡಿ. ದೇವೇಗೌಡ
Published On :

ಹಾಸನ: ಹಾಸನದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಹ ವಿಶೇಷತೆ ಏನೂ ಇಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಹಾಸನ ಹಾಗೂ ಸುತ್ತಮುತ್ತಲಿನ ಜಿಲ್ಲೆಗೆ ಸೇರಿದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಹಾಸನದಲ್ಲಿ ಶಾಸಕಾಂಗ ಸಭೆ ಮಾಡಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.

ಬಿಜೆಪಿ ಹಾಗೂ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಕುರಿತು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಬಿಜೆಪಿ ರಾಜಕಾರಣಗೊಳಿಸುತ್ತಿದೆ. ಈ ವಿಚಾರದಲ್ಲಿ ಹೆಚ್ಚಿನ  ಪ್ರತಿಕ್ರಿಯೆ ನೀಡಲು ಆಸಕ್ತಿ ಇಲ್ಲ ಎಂದರು.

ಬಿಜೆಪಿಯ ಆಪರೇಷನ್ ಕಮಲ ಕುರಿತಂತೆ ಮಾತನಾಡಿದ ದೇವೇಗೌಡ, ಜೆಡಿಎಸ್ , ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರನ್ನು ಅಸ್ಥಿರಗೊಳಿಸಲು ಬಿಜೆಪಿ ಕೆಲ ತಿಂಗಳುಗಳಿಂದ ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.