ಕೋಲಾರ ಲೋಕಸಭಾ ಸ್ಥಾನದಿಂದ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧ: ನಿರ್ಮಲಾ ವೆಂಕಟೇಶ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವರಿಷ್ಠರು ಅವಕಾಶ ನೀಡಿದ್ದರೆ ಬಿಜೆಪಿಯಿಂದ ಕೋಲಾರ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಮಾಜಿ ವಿಧಾನಪರಿಷತ್ ಸದಸ್ಯೆ ಹಾಗೂ ರಾಷ್ಟ್ರೀಯ ಮಹಿಳೆ ಆಯೋಗದ ಮಾಜಿ ಅಧ್ಯಕ್ಷೆ ನಿರ್ಮಲಾ ವೆಂಕಟೇಶ್ ಹೇಳಿದ್ದಾರೆ.

ಕೋಲಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವರಿಷ್ಠರು ಅವಕಾಶ ನೀಡಿದ್ದರೆ ಬಿಜೆಪಿಯಿಂದ ಕೋಲಾರ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಮಾಜಿ ವಿಧಾನಪರಿಷತ್ ಸದಸ್ಯೆ ಹಾಗೂ ರಾಷ್ಟ್ರೀಯ ಮಹಿಳೆ ಆಯೋಗದ ಮಾಜಿ ಅಧ್ಯಕ್ಷೆ ನಿರ್ಮಲಾ ವೆಂಕಟೇಶ್ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಸತತ ಏಳು ಅವಧಿಗೆ ಕೋಲಾರದ ಜನ ಆಯ್ಕೆ ಮಾಡಿದ್ದಾರೆ. ಆದರೆ, ಅವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಮುನಿಯಪ್ಪ ಅವರ ಆಡಳಿತದಿಂದ ಜನ ಬೇಸತ್ತಿದ್ದು, ಈಗ ಬದಲಾವಣೆಗೆ ಬಯಸಿದ್ದಾರೆ ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದರೆ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದರು.
ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದು, ಅವಕಾಶ ಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸವಿದೆ ಎಂದರು.
ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, ಪ್ರತಿ ಕ್ಷೇತ್ರದಲ್ಲೂ ಪ್ರವಾಸ ಮಾಡಿದ್ದೇನೆ. ಪಕ್ಷದ ಕಾರ್ಯಕರ್ತರು ಹಾಗೂ ನಾಯಕರೊಂದಿಗೆ ಚುನಾವಣೆ ಸಂಬಂಧ ಚರ್ಚೆ ನಡೆಸಿರುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


