ವಿಧಾನಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ
ಮುಂಬರುವ ವಿಧಾನಪರಿಷತ್ ಉಪ ಚುನಾವಣೆಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ. ನಾಸಿರ್ ಅಹ್ಮದ್ ಹಾಗೂ ಎಂ. ಸಿ. ವೇಣುಗೋಪಾಲ್ ಅವರನ್ನು ಅಕ್ಟೋಬರ್ 4 ರಂದು ನಡೆಯಲಿರುವ ಚುನಾವಣೆಗೆ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ.

ಬೆಂಗಳೂರು: ಮುಂಬರುವ ವಿಧಾನಪರಿಷತ್ ಉಪ ಚುನಾವಣೆಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ.
ಪಕ್ಷದ ಹೈಕಮಾಂಡ್ ನೊಂದಿಗೆ ಸುಧೀರ್ಘ ಚರ್ಚೆ ನಡೆಸುವ ಮೂಲಕ ನಾಸಿರ್ ಅಹ್ಮದ್ ಹಾಗೂ ಎಂ. ಸಿ. ವೇಣುಗೋಪಾಲ್ ಅವರನ್ನು ಅಕ್ಟೋಬರ್ 4 ರಂದು ನಡೆಯಲಿರುವ ಚುನಾವಣೆಗೆ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ.
ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಸಮನ್ವಯ ಸಮಿತಿ ಸಭೆಯಲ್ಲಿನ ಚರ್ಚೆಯಂತೆ ಕಾಂಗ್ರೆಸ್ ಎರಡು ಹಾಗೂ ಜೆಡಿಎಸ್ ಒಂದು ಸ್ಥಾನಗಳಿಗೆ ಸ್ಪರ್ಧಿಸುತ್ತಿದೆ. ಬಿಜೆಪಿ ಮೂರು ಸ್ಥಾನಗಳಿಗೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.
ಮಾಜಿ ವಿಧಾನಸಭಾ ಸದಸ್ಯರಾಗಿದ್ದ ನಾಸಿರ್ ಅಹ್ಮದ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರಾಗಿದ್ದರೆ. ವೇಣುಗೋಪಾಲ್ ಪರವಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಲಾಬಿ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


