ಜೀರೋ ಟ್ರಾಫಿಕ್‌ನಿಂದ ಜನಸಾಮಾನ್ಯರಿಗೆ ತೊಂದರೆ: ಡಿಸಿಎಂ ಪರಮೇಶ್ವರ ವಿಷಾದ
ಜೀರೋ ಟ್ರಾಫಿಕ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವುದನ್ನು ಪ್ರಶ್ನಿಸಿದ್ದ ಮಾಧ್ಯಮಗಳ....

Published On :
ಬೆಂಗಳೂರು: ಜೀರೋ ಟ್ರಾಫಿಕ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವುದನ್ನು ಪ್ರಶ್ನಿಸಿದ್ದ ಮಾಧ್ಯಮಗಳ ವಿರುದ್ಧವೇ ಗರಂ ಆಗಿದ್ದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರಿಗೆ ಕೆಟ್ಟ ಮೇಲೆ ಬುದ್ದಿ ಬಂದಿದ್ದು, ಈಗ ವಿಷಾದ ವ್ಯಕ್ತಪಡಿಸಿದ್ದಾರೆ.
ಜೀರೋ ಟ್ರಾಫಿಕ್ ನಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿರುವುದಕ್ಕೆ ವಿಷಾದಿಸುತ್ತೇನೆ. ಆದರೆ, ಪ್ರತಿನಿತ್ಯ ಸರ್ಕಾರದ ಹತ್ತಾರು ಕಾರ್ಯಕ್ರಮ,ಸಭೆಗಳು ಇರುವುದರಿಂದ ಸಮಯ ಪಾಲನೆ ಅನಿವಾರ್ಯ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಗೃಹ ಸಚಿವರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ನೀಡಲಾಗಿದೆ. ಸಾಧ್ಯವಾದಷ್ಟು ಟ್ರಾಫಿಕ್ ಆಗದಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಪರಮೇಶ್ವರ ಅವರು ಟ್ಟೀಟ್ ಮಾಡಿದ್ದಾರೆ.
ಪರಮೇಶ್ವರ ಅವರು ಇಂದು ಬೆಳಗ್ಗೆ ಕೊಡವ ಸಮಾಜ ಮತ್ತು ಬಿಬಿಎಂಪಿ ಸಹಯೋಗದಲ್ಲಿ ನಗರದ ಮಿಲ್ಲರ್ಸ್ ರಸ್ತೆಯ ಜಂಕ್ಷನ್ ಬಳಿ ಸ್ಥಾಪಿಸಲಾಗಿರುವ ಫೀಲ್ಡ್ ಮಾರ್ಷಲ್ ಕಾರಿಯಪ್ಪರವರ ಪ್ರತಿಮೆ ಉದ್ಘಾಟನೆಗೆ ಝಿರೋ ಟ್ರಾಫಿಕ್ ಮೂಲಕವೇ ಆಗಮಿಸಿದ್ದರು. ನಾನು ಝಿರೋ ಟ್ರಾಫಿಕ್ ತಗೆದುಕೊಳ್ಳುವುದು ಮಾಧ್ಯಮಗಳಿಗೆ ಹೊಟ್ಟೆ ಉರಿಯೇ ಎಂದು ಪರಮೇಶ್ವರ ಪ್ರಶ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


