ರಾಜಕೀಯ

ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ, ಮೇ 19ಕ್ಕೆ ಮತದಾನ

ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಕರ್ನಾಟಕದ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಿದ್ದು, ಮೇ 19ರಂದು ಮತದಾನ....

ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ, ಮೇ 19ಕ್ಕೆ ಮತದಾನ
ಉಮೇಶ್ ಜಾಧವ್
Published On :
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಕರ್ನಾಟಕದ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಿದ್ದು, ಮೇ 19ರಂದು ಮತದಾನ ನಡೆಯಲಿದೆ. ಮೇ 23ರಂದು ಲೋಕಸಭೆ ಚುನಾವಣೆಯ ಫಲಿತಾಂಶದೊಂದಿಗೆ ಚಿಂಚೋಳಿ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ಶಾಸಕರಾಗಿದ್ದ ಡಾ. ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾದ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರಕ್ಕೆ ಚುನಾವಣಾ ಆಯೋಗ ಇಂದು ಉಪ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ರಾಜಕೀಯ ಪಕ್ಷಗಳ ನಾಯಕರು ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಉಪ ಚುನಾವಣೆಯ ಸವಾಲು ಎದುರಿಸಬೇಕಾಗಿದೆ.
ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದು, ಈಗ ಕಲಬುರ್ಗಿಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಉಪ ಚುನಾವಣೆಯ ವೇಳಾಪಟ್ಟಿ
ಅಧಿಸೂಚನೆ ಪ್ರಕಟ: ಏಪ್ರಿಲ್‌ 24 
ನಾಮಪತ್ರ ಸಲ್ಲಿಕೆಗೆ ಕೊನೆ ದಿನ: ಏಪ್ರಿಲ್‌ 29 
ನಾಮಪತ್ರ ಪರಿಶೀಲನೆ: ಏಪ್ರಿಲ್ 30 
ನಾಮಪತ್ರ ಹಿಂತೆಗೆತಕ್ಕೆ ಕೊನೆ ದಿನ: ಮೇ 2 
ಮತದಾನ: ಮೇ 19 (ಭಾನುವಾರ) 
ಮತ ಎಣಿಕೆ: ಮೇ 23

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.