ರಮೇಶ್ ನನ್ನು ತಡೆಯದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ: ಸತೀಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಅವರನ್ನು ತಡೆಯದಿದ್ದರೇ ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಎದುರಾಗಲಿದೆ ಎಂದು ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಸತೀಶ್ ಜಾರಕಿಹೊಳಿ ...

Published On :
ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿಗೆ ತಲೆ ಕೆಟ್ಟಿದೆ ಎಂದು ಮಾಜಿ ಸಚಿವ ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು, ಈ ಹಂತದಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಎದುರಾಗಲಿದೆ ಎಂದು ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಹೋದರ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕಿಡಿ ಕಾರಿದ ರಮೇಶ್ ಜಾರಕಿಹೊಳಿ, ಈಗಾಗಲೆ ಒಬ್ಬ ಸಹೋದರನನ್ನು ಹಾಳು ಮಾಡಿದ್ದಾನೆ. ಅವನ ತಲೆ ಕೆಟ್ಟಿದೆ ಎಂದರು.
ಗೋಕಾಕ್‌ನಲ್ಲಿ ಲಖನ್ ಸ್ಪರ್ಧಿಸಿದರೆ ನನ್ನಷ್ಟು ಖುಷಿ ಪಡುವ ವ್ಯಕ್ತಿ ಬೇರೆಯವರಿಲ್ಲ ಎಂದರು.
ರಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ ಸಹೋದರ ಲಖನ್ ಜಾರಕಿಹೊಳಿ ನಾನು ಎಲ್ಲೋ ಹಾಳಾಗಿ ಹೋಗಿಲ್ಲ. ಕಾಂಗ್ರೆಸ್‌ನಲ್ಲೇ ಇದ್ದೇನೆ. ಸಿದ್ದರಾಮಯ್ಯ ನಮ್ಮ ನಾಯಕ. ಗೋಕಾಕ್ ಕಾಂಗ್ರೆಸ್‌ನ ಭದ್ರ ಕೋಟೆ ಎಂದು ಹೇಳಿದ್ದಾರೆ.
ಇನ್ನೂ ಈ ಸಂಬಂಧ ಪ್ರತಿಕ್ರಯಿಸಿರುವ ರಮೇಶ್ ಜಾರಕಿಹೊಳಿ ನಾನು ತಾಂತ್ರಿಕವಾಗಿ ಇನ್ನೂ ಕಾಂಗ್ರೆಸ್ ನಲ್ಲಿದ್ದೇನೆ, ಶೀಘ್ರವೇ ನಾನು ರಾಜಿನಾಮೆ ನೀಡುತ್ತೇನೆ, ನನಗೆ ಕಾಂಗ್ರೆಸ್ ನಾಯಕತ್ವದ ಮೇಲೆ ಅಸಮಾಧಾನ ಇದೆ, 1999ಕ್ಕಿಂತ ರಾಜ್ಯ ಕಾಂಗ್ರೆಸ್ ಕೆಟ್ಟಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸತೀಶ್ ಜಾರಕಿಹೊಳಿPoliticsಸಮ್ಮಿಶ್ರ ಸರ್ಕಾರmadರಮೇಶ್ ಜಾರಕಿಹೊಳಿsathish JarakiholiRamesh Jarakijholicoalition governmentಕಂಟಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


