ಮಾಜಿ ಡಿಸಿಎಂ ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪತ್ರ : ಲೆಟರ್ ಬಗ್ಗೆ ಆರ್. ಅಶೋಕ್ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಆಯೋಜನೆ ಸೇರಿದಂತೆ ಎಲ್ಲ ಕೆಲಸಗಳಲ್ಲೂ ತೊಡಗಿಕೊಂಡಿದ್ದ ಆರ್.ಅಶೋಕ್ಅವರ ಕಾರ್ಯಕ್ಕೆ ...

Published On :
ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನಾ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಆಯೋಜನೆ ಸೇರಿದಂತೆ ಎಲ್ಲ ಕೆಲಸಗಳಲ್ಲೂ ತೊಡಗಿಕೊಂಡಿದ್ದ ಆರ್.ಅಶೋಕ್ಅವರ ಕಾರ್ಯಕ್ಕೆ ಶಾ ವಿಶೇಷ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬಿಜೆಪಿ ಅಭೂತಪೂರ್ವ ಗೆಲುವು ಪಡೆದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಲೋಕಸಭಾ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ ಎಂದು ಕೊಂಡಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತು 303 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ. ಚುನಾವಣೆ ಕಾರ್ಯದಲ್ಲಿ ನಮ್ಮ ಅಳಿಲು ಸೇವೆಯನ್ನು ಶ್ಲಾಘಿಸಿ ಪಕ್ಷದ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಅವರು ನಮಗೆ ಅಭಿನಂದನಾ ಪತ್ರ ಕಳುಹಿಸಿರುವುದು ಹರ್ಷ ತಂದಿದೆ. ಈ ಅಭಿನಂದನೆ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು
ಅಲ್ಲದೇ ರಾಜ್ಯದಲ್ಲೂ ಕೂಡ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಬೆನ್ನಲ್ಲೆ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಂಘಟನೆ, ಕಾರ್ಯ ವೈಖರಿಯಿಂದಲೇ 2014ರ ಲೋಕಸಭಾ ಚುನಾವಣೆಗಿಂತ ಹೆಚ್ಚು ಸ್ಥಾನ ಗೆಲ್ಲಲು ಸಹಾಯಕವಾಗಿದೆ. ಮುಂದಿನ ದಿನಗಳಲ್ಲೂ ಕೂಡ ಇದೇ ರೀತಿ ಪಕ್ಷ ಸಂಘಟನೆ ಮಾಡಬೇಕೆಂದು ಅಮಿತ್ ಶಾ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಸದ್ಯ ಈ ಪತ್ರಕ್ಕೆ ಸಂಭ್ರಮ ವ್ಯಕ್ತಪಡಿಸಿರುವ ಆರ್.ಅಶೋಕ್ ಅವರು, ಅಮಿತ್ ಶಾ ಹೇಳಿರುವ ಅಭಿನಂದನೆ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು ಎಂದು ಪ್ರತಿಕ್ರಿಯೆ ನೀಡಿದ್ದು ಈ ವಿಷಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


