ಒಂದೆಡೆ ಅತಿವೃಷ್ಠಿ, ಮತ್ತೊಂದೆಡೆ ಅನಾವೃಷ್ಟಿ, ಜನರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ಇದೇನು ಏಕಚಕ್ರಾಧಿಪತ್ಯವೇ?
ಒಂದೆಡೆ ಅತೀವೃಷ್ಠಿ, ಮತ್ತೊಂದೆಡೆ ಅನಾವೃಷ್ಟಿ, ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ಇದೇನು ಏಕಚಕ್ರಾಧಿಪತ್ಯವೇ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ

Published On :
ಬೆಂಗಳೂರು: ಒಂದೆಡೆ ಅತೀವೃಷ್ಠಿ, ಮತ್ತೊಂದೆಡೆ ಅನಾವೃಷ್ಟಿ, ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ಇದೇನು ಏಕಚಕ್ರಾಧಿಪತ್ಯವೇ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ
ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬವನ್ನು ಮುಂದಿಟ್ಟು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲೆಳೆದಿದ್ದಾರೆ. ತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ ?, ಸಂಪುಟ ವಿಸ್ತರಣೆಯದ್ದೇ? ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ ? ಅತಿವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ ? ಏಕಚಕ್ರಾಧಿಪತ್ಯವೇ ? ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
'ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ಅವರು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?.. ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ,ಕೃಷಿ,ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ?.. ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ?' ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengalurubjpಬಿಜೆಪಿPoliticsರಾಜಕೀಯSiddaramaiahಸಿದ್ದರಾಮಯ್ಯcabinet expansionBS Yeddyurappaಬಿ.ಎಸ್.ಯಡಿಯೂರಪ್ಪಸಂಪುಟವಿಸ್ತರಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


