ಶಕ್ತಿ ಸೌಧದಲ್ಲಿ ಹಲ್ಲೆ: ಮಾಜಿ ಶಾಸಕನ ವಿರುದ್ಧ ಎಫ್ ಐಆರ್ ದಾಖಲು
ಜುಲೈ 10 ರಂದು ಶಕ್ತಿ ಸೌಧ ವಿಧಾನಸೌಧದಲ್ಲಿ ರಾಜೀನಾಮೆ ಕೊಡಲು ಹೋಗಿದ್ದಾಗ ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ಮಾಜಿ ಶಾಸಕ ನಜೀರ್ ಅಹ್ಮದ್ ವಿರುದ್ಧ ವಿಧಾನಸೌಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಜುಲೈ 10 ರಂದು ಶಕ್ತಿ ಸೌಧ ವಿಧಾನಸೌಧದಲ್ಲಿ ರಾಜೀನಾಮೆ ಕೊಡಲು ಹೋಗಿದ್ದಾಗ ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ಮಾಜಿ ಶಾಸಕ ನಜೀರ್ ಅಹ್ಮದ್ ವಿರುದ್ಧ ವಿಧಾನಸೌಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಈ ಪ್ರಕರಣ ಸಂಬಂಧ ಜುಲೈ 23 ರಂದು ವಕೀಲ ಅಮೃತೇಶ್ ಎನ್ ಪಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿದ ಪೊಲೀಸರು ಎಫ್ ಐಆರ್ ದಾಖಲು ಮಾಡಿರಲಿಲ್ಲ. ನಂತರ ಪೊಲೀಸರು ಉದ್ದೇಶಪೂರ್ವಕವಾಗಿಯೇ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ದೂರುದಾರರು ಹೈಕೋರ್ಟ್ ಮೊರೆ ಹೋಗಿದ್ದರು.
ಶನಿವಾರ ಸುಧಾಕರ್ ಅವರಿಂದ ಹೇಳಿಕೆ ಪಡೆದ ಪೊಲೀಸರು ಹೇಳಿಕೆ ಆಧಾರದ ಮೇಲೆ ಎಫ್ ಐಆರ್ ದಾಖಲಿಸಿದ್ದಾರೆ. ಮಾನ ಹಾನಿ, ಹಲ್ಲೆ ಮತ್ತಿತರ ಆರೋಪದಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಆದಾಗ್ಯೂ , ಪೊಲೀಸರು ಈವರೆಗೂ ನಜೀರ್ ಅಹ್ಮದ್ ಮತ್ತಿತರನ್ನು ವಿಚಾರಣೆಗೊಳಪಡಿಸಿಲ್ಲ.
ಜುಲೈ 10 ರಂದು ಸುಧಾಕರ್ ರಾಜೀನಾಮೆ ನೀಡುವಾಗ ಅವರನ್ನು ಕೆಲ ಕಾಂಗ್ರೆಸ್ ಮುಖಂಡರು ಕುತ್ತಿಗೆ ಪಟ್ಟಿಗೆ ಹಿಡಿದು ಕೊಠಡಿಯೊಂದಕ್ಕೆ ಕರೆದುಕೊಂಡು ಹೋಗಿ ಮನವೊಲಿಸುವ ಪ್ರಯತ್ನ ನಡೆಸಿದ್ದರು. ಆದರೆ, ನಂತರ ರಾಜ್ಯಪಾಲರ ಸೂಚನೆ ಮೇರೆಗೆ ಪೊಲೀಸರು ಸುಧಾಕರ್ ಅವರನ್ನು ರಕ್ಷಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


