ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡದಿದ್ದಲ್ಲಿ ಸರ್ಕಾರ ಪತನ: ಬಿಜೆಪಿ ಶಾಸಕ
ನೆರೆ ಸಂತ್ರಸ್ತರಿಗ ರಾಜ್ಯಸರ್ಕಾರ ಮನೆ ನಿರ್ಮಿಸಿಕೊಡಬೇಕು, ಇಲ್ಲವಾದಲ್ಲಿ ಸರ್ಕಾರವನ್ನೇ ಪತನಗೊಳಿಸುತ್ತೇವೆ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಚಿಕ್ಕೋಡಿ: ನೆರೆ ಸಂತ್ರಸ್ತರಿಗ ರಾಜ್ಯಸರ್ಕಾರ ಮನೆ ನಿರ್ಮಿಸಿಕೊಡಬೇಕು, ಇಲ್ಲವಾದಲ್ಲಿ ಸರ್ಕಾರವನ್ನೇ ಪತನಗೊಳಿಸುತ್ತೇವೆ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ನೆರೆ ಪೀಡಿತ ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಚರ್ಚಿಸುವ ವೇಳೆಯಲ್ಲಿ ಇಂತಹದ್ದೊಂದು ಹೇಳಿಕೆ ನೀಡುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಸರ್ಕಾರ ಮನೆ ನಿರ್ಮಿಸಿಕೊಡಬೇಕು, ಇಲ್ಲವಾದಲ್ಲಿ ಈ ಸರ್ಕಾರವನ್ನು ಉಳಿಸುವುದಿಲ್ಲ. ನಿಮಗೆ ಮನೆ ಕಟ್ಟಿಸಿಕೊಡುವ ಜವಾಬ್ದಾರಿ ನಮ್ಮದು ಎಂದು ನೆರೆ ಸಂತ್ರಸ್ತರಿಗೆ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದ್ದಾರೆ.
ಸಚಿವ ಸ್ಥಾನ ಸಿಗದೆ ಅಣ್ಣಾ ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಈಗ ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡದಿದ್ದಲ್ಲಿ ಸರ್ಕಾರ ಪತನಗೊಳಿಸುವುದಾಗಿ ಆಡಳಿತಾರೂಢ ಪಕ್ಷದ ಶಾಸಕ ಹಾಗೂ ರಮೇಶ್ ಜಾರಕಿಹೊಳಿ ತಮ್ಮ ಬಾಲಚಂದ್ರ ಜಾರಕಿಹೊಳಿ ಹೇಳುವ ಮೂಲಕ ಸರ್ಕಾರಕ್ಕೆ ಆರಂಭದಲ್ಲಿಯೇ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


