ದೂರವಾಣಿ ಕದ್ದಾಲಿಕೆ ಆರೋಪ: ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲವು ಮಂದಿಯ ದೂರವಾಣಿಯನ್ನು ಕದ್ದಾಲಿಸಿದ್ದಾರೆ ಎಂದು ಬಿಜೆಪಿ ಶಾಸಕರ ಗಂಭೀರ ಆರೋಪಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ..

ಬೆಂಗಳೂರು: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲವು ಮಂದಿಯ ದೂರವಾಣಿಯನ್ನು ಕದ್ದಾಲಿಸಿದ್ದಾರೆ ಎಂದು ಬಿಜೆಪಿ ಶಾಸಕರ ಗಂಭೀರ ಆರೋಪಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.
ಕುಮಾರಸ್ವಾಮಿ 14 ತಿಂಗಳ ಕಾಲ ಸಿಎಂ ಆಗಿದ್ದ ಅವಧಿಯಲ್ಲಿ ಹಲವು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ದೂರವಾಣಿಯನ್ನು ಕದ್ದಾಲಿಸಿದ್ದಾರೆ ಎಂದು ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಬಿಜೆಪಿ ನಾಯಕರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕಾಂಗ್ರೆಸ್,.ಜೆಡಿಎಸ್, ಹಾಗೂ ಬಿಜೆಪಿಯ ಹಿರಿಯ ನಾಯಕರು, ಹಿರಿಯ ಅಧಿಕಾರಿಗಳು, ಹಾಗೂ ಪತ್ರಕರ್ತರ ಫೋನ್ ಗಳನ್ನು ಕದ್ದಾಲಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ, ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


