'ಪ್ರಮಾಣ ವಚನ ಸ್ವೀಕರಿಸುವ ಭರದಲ್ಲಿ ನೂತನ ಸಚಿವ ಜೆ.ಸಿ ಮಾಧುಸ್ವಾಮಿ ಯಡವಟ್ಟು'
ಬಿ.ಎಸ್ ಯಡಿಯೂರಪ್ಪ ನೇತತ್ವದ ಬಿಜೆಪಿ ಸರ್ಕಾರದ ಸಂಪುಟ ರಚನೆಯಾಗಿದೆ, ಎಲ್ಲಾ 17 ಶಾಸಕರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ನೇತತ್ವದ ಬಿಜೆಪಿ ಸರ್ಕಾರದ ಸಂಪುಟ ರಚನೆಯಾಗಿದೆ, ಎಲ್ಲಾ 17 ಶಾಸಕರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ ಮಾಧುಸ್ವಾಮಿ ಪ್ರಮಾಣವಚನ ಸ್ವೀಕರಿಸುವ ವೇಳೆ 'ಮುಖ್ಯಮಂತ್ರಿ'ಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಹೇಳಿ ನಂತರ ತಪ್ಪು ತಿದ್ದು ಕೊಂಡು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಹೇಳಿದರು, ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಸುನಗುತ್ತಿದ್ದರು.
ಇನ್ನೂ ಪ್ರಭು ಚವಾಣ್ ತಮ್ಮ ಲಂಬಾಣಿ ಡ್ರೆಸ್ ಧರಿಸಿಕೊಂಡು ಝಗಮಗಿಸುತ್ತದ್ದರು. ಇನ್ನೂ ಬಿಎಸ್ ವೈ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವೆಯಾಗಿ ಶಶಿಕಲಾ ಜೊಲ್ಲೆ ಅಧಿಕಾರ ಸ್ವೀಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


