ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಜ್ವಾಲಾಮುಖಿ
17 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಕೊನೆಯ ಕ್ಷಣದವರೆಗೂ ಸಚಿವರು ಯಾರಾಗಲಿದ್ದಾರೆ ಎಂಬುದು ರಹಸ್ಯವಾಗೇ ಉಳಿದಿತ್ತು. ...

ಬೆಂಗಳೂರು: 17 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಕೊನೆಯ ಕ್ಷಣದವರೆಗೂ ಸಚಿವರು ಯಾರಾಗಲಿದ್ದಾರೆ ಎಂಬುದು ರಹಸ್ಯವಾಗೇ ಉಳಿದಿತ್ತು. ಆದರೀಗ ಇದಕ್ಕೆ ತೆರೆ ಬಿದ್ದಿದ್ದು, ಸಚಿವರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮೊದಲ ಹಂತದಲ್ಲಿ ಸಚಿವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ತಮಗೂ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅತ್ತ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದ್ದರೆ ಇತ್ತ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಅತೃಪ್ತ ಶಾಸಕರು ಗೈರಾಗಿದ್ದಾರೆ. ರೇಣುಕಾಚಾರ್ಯ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ತಿಪ್ಪಾರೆಡ್ಡಿ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ರಾಮದಾಸ್, ಶಿವನಗೌಡ ನಾಯಕ್, ಕೆ.ಜಿ.ಬೋಪಯ್ಯ ಇವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗಿದ್ದರು.
ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಡಿಸಿದ್ದಾರೆ. 'ನನಗೆ ಅನ್ಯಾಯ ಆಗಿದೆ. ಹೊರಗಿನವರೇ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಿದ್ದಾರೆ. ಹಿರಿತನ, ಪಕ್ಷನಿಷ್ಠೆ ಗುರುತಿಸಿ ಮಂತ್ರಿಗಿರಿ ನೀಡದ್ದಕ್ಕೆ ಬೇಸರವಾಗಿದೆ. ನಾನು 6 ಬಾರಿ ಶಾಸಕನಾದ್ರೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ನನ್ನನ್ನು ಪಕ್ಷದ ಮುಖಂಡರು ಕಡೆಗಣಿಸಿದ್ದಾರೆ. ನನಗೆ ಅನ್ಯಾಯವಾಗಿದೆ, ಕೆಲ ಶಾಸಕರು ಇಂದು ಬೆಂಗಳೂರಿನಲ್ಲಿ ಸೇರಿ ಚರ್ಚಿಸುತ್ತೇವೆ. ಬಿಎಸ್‌ವೈ, ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡುತ್ತೇವೆ. ರಾಜ್ಯದ ಅಭಿವೃದ್ಧಿಯಾಗಬೇಕು ಅನ್ನೋದೇ ನನ್ನ ಉದ್ದೇಶ' ಎಂದಿದ್ದಾರೆ.
ಇನ್ನೂ ಶಾಸಕ ಗೂಳಿಹಟ್ಟಿ ಶೇಖರ್ ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ, ನಾನು ಬಿಜೆಪಿ ಸೇರಿ ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


