ಸಚಿವ ಸ್ಥಾನಕ್ಕಾಗಿ ಬಂಡಾಯ ಸಾರುವುದಿಲ್ಲ, ನಾನು ಪಕ್ಷದ ನಿಷ್ಠಾವಂತ: ರೇಣುಕಾಚಾರ್ಯ
ತಮ್ಮ ಗುರಿ ಮಂತ್ರಿ ಸ್ಥಾನವಲ್ಲ. ತಾವು ಮಂತ್ರಿ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ ಮತ್ತು ನಾನು ಪ್ರಬುದ್ಧ ರಾಜಕಾರಣಿಯಾಗಿ ಬೆಳೆಯಬೇಕು. ಇಂದು ಸಂಜೆ ಕೆಲವು ಶಾಸಕರು ಒಟ್ಟಾಗಿ ಮುಖ್ಯಮಂತ್ರಿ....

ಬೆಂಗಳೂರು: ತಮ್ಮ ಗುರಿ ಮಂತ್ರಿ ಸ್ಥಾನವಲ್ಲ. ತಾವು ಮಂತ್ರಿ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ ಮತ್ತು ನಾನು ಪ್ರಬುದ್ಧ ರಾಜಕಾರಣಿಯಾಗಿ ಬೆಳೆಯಬೇಕು. ಇಂದು ಸಂಜೆ ಕೆಲವು ಶಾಸಕರು ಒಟ್ಟಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇವೆ. ನಮ್ಮ ಕ್ಷೇತ್ರಗಳ ಅಭಿವೃದ್ಧಿ ಮತ್ತು ಅನುದಾನದ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ನೀಡಿದ ಹೇಳಿಕೆಯನ್ನು ಕೆಲವರು ತಿರುಚಿ ಸುದ್ದಿ ಪ್ರಸಾರ ಮಾಡಿದ್ದಾರೆ. ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ತಮಗೆ ಹಾಗೂ ಸಚಿವ ಸ್ಥಾನದಿಂದ ವಂಚಿತರಾಗಿರುವ ಹಿರಿಯ ನಾಯಕರಿಗೆ ಬೇಸರವಿದೆ ನಿಜ. ಹಾಗಂದ ಮಾತ್ರಕ್ಕೆ ಸರ್ಕಾರದ ವಿರುದ್ಧ ಬಂಡಾಯ ಸಾರುವುದಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿಲ್ಲ ಎಂದು ರೇಣುಕಾಚಾರ್ಯ ಸ್ಪಷ್ಟೀಕರಣ ನೀಡಿದರು.
ಸಚಿವ ಸಂಪುಟ ವಿಸ್ತರಣೆಯಿಂದ ತಮಗಾದ ಅಸಮಾಧಾನವನ್ನು ಮಾಧ್ಯಮಗಳ ಮುಂದೆ ತೋಡಿಕೊಂಡಿದ್ದೇನೆ. ತಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದರೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೇನೆ. ಸಚಿವ ಸ್ಥಾನ ಸಿಗದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಅದನ್ನು ಹೊರತುಪಡಿಸಿ ಯಡಿಯೂರಪ್ಪ ವಿರುದ್ಧ ಮಾತನಾಡುವುದಿಲ್ಲ ಎಂದು ರೇಣುಕಾಚಾರ್ಯ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


