ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಕಾರಣ: ಎಚ್ ಡಿ ದೇವೇಗೌಡ
ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ತೆರೆಮರೆಯಲ್ಲಿ ಸಹಕರಿಸಿದ್ದರು ಎಂಬ ಆರೋಪದ ಬೆನ್ನಲ್ಲೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಅವರೇ...

ಬೆಂಗಳೂರು: ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ತೆರೆಮರೆಯಲ್ಲಿ ಸಹಕರಿಸಿದ್ದರು ಎಂಬ ಆರೋಪದ ಬೆನ್ನಲ್ಲೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ನೇರವಾಗಿಯೇ ಆರೋಪಿಸಿದ್ದಾರೆ.
ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ಮೊದಲಿಂದಲೂ ತಿಕ್ಕಾಟ ಇತ್ತು. ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಬೇಕೆಂದು ಒತ್ತಾಯಿಸಿದ್ದರು. ಆದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ ಎಂದರು.
ಕುಮಾರಸ್ವಾಮಿ ಮುಖ್ಯಮಂತ್ತಿಯಾಗುವುದಕ್ಕೆ ತಮ್ಮ ಒಪ್ಪಿಗೆ ಇಲ್ಲ ಎಂಬುದನ್ನು ಸಿದ್ದರಾಮಯ್ಯ ಅವರ ಆಪ್ತರೇ ಹೇಳಿದ್ದಾರೆ. ಕಾಂಗ್ರೆಸ್ ಜೊತೆ ಪಕ್ಷ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿದ್ದ ಕುಮಾರಸ್ವಾಮಿಗೆ ದಿನನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಕಿರಿಕಿರಿ ನಡುವೆ ಸರ್ಕಾರ ನಡೆಸುತ್ತಿದ್ದ ಕುಮಾರಸ್ವಾಮಿ ಈಗ ನಿರಾಳರಾಗಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


