ದೇವೇಗೌಡರ ಆರೋಪದಲ್ಲಿ ಹುರುಳಿಲ್ಲ- ದಿನೇಶ್ ಗುಂಡೂರಾವ್
ಮೈತ್ರಿ ಸರ್ಕಾರ ಉರುಳಲು ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮಾಡಿರುವ ಆರೋಪವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಲ್ಲಗಳೆದಿದ್ದಾರೆ.

ಬೆಂಗಳೂರು: ಮೈತ್ರಿ ಸರ್ಕಾರ ಉರುಳಲು ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮಾಡಿರುವ ಆರೋಪವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಲ್ಲಗಳೆದಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕೆಲವು ಸ್ಥಳೀಯ ಸಮಸ್ಯೆಗಳಿಂದಾಗಿ ಸೋಲಾಯಿತೇ ವಿನಾ: ಜೆಡಿಎಸ್ ಸೋಲಿಗೆ ಕಾಂಗ್ರೆಸ್ ಕಾರಣವಲ್ಲ ಎಂದರು. ದೇವೇಗೌಡರು ಈ ರೀತಿಯ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ. ಸಿದ್ದರಾಮಯ್ಯ ಸರಿಯಾಗಿಯೇ ಹೇಳಿದ್ದಾರೆ. ಅವರ ಬಗ್ಗೆ ಆರೋಪ ಮಾಡಿದ್ದರಿಂದ ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮಧ್ಯ ಅಧಿಕಾರ ಹಂಚಿಕೆ, ಶಾಸಕರ ಕೆಲಸಗಳ ಬಗ್ಗೆ ಸಮಸ್ಯೆಗಳು ಇತ್ತು. ಆದರೆ, ವೈಯಕ್ತಿಕ ವಿಚಾರಕ್ಕೆ ಯಾವತ್ತೂ ತೊಂದರೆ ನೀಡಿರಲಿಲ್ಲ. ಸರ್ಕಾರ ಪತನಗೊಳ್ಳುವ ಕೊನೆ ಗಳಿಗೆಯವರೆಗೂ ಎಲ್ಲಾ ರೀತಿಯ ಸಹಕಾರ ನೀಡಲಾಗಿತ್ತು. ಆದರೂ, ಕಾಂಗ್ರೆಸ್ ಮೇಲೆ ವಿನಾಕಾರಣ ಆರೋಪ ಮಾಡಲಾಗುತಿತ್ತು. ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು ಕಣ್ಣೀರಿಡುವ ಮೂಲಕ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದರು. ಇದು ನಾಟಕೀಯವಾಗಿದ್ದರೂ ಅಸಾಮರ್ಥ್ಯತತೆಯನ್ನು ತೋರಿಸುತಿತ್ತು ಎಂದು ಟೀಕಿಸಿದರು.
ಜೆಡಿಎಸ್ ಜೊತೆಗಿನ ಮೈತ್ರಿ ಮುಂದುವರೆಯಬೇಕಾ ? ಅಥವಾ ಕಡಿದುಕೊಳ್ಳಬೇಕಾ ಎಂಬುದನ್ನು ನಿರ್ಧರಿಸಲು ಸಕಾಲವಲ್ಲ, ಹೈಕಮಾಂಡ್ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತದೆ ಎಂದು ಅವರು ಇದೇ ವೇಳೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


