ರಾಜಕೀಯ

'ಹಾಲು ಕುಡಿದ ಮಕ್ಕಳೇ ಬದುಕಲ್ಲ ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವಾ'?

ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು, ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

'ಹಾಲು ಕುಡಿದ ಮಕ್ಕಳೇ ಬದುಕಲ್ಲ ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವಾ'?
ಸಿದ್ದರಾಮಯ್ಯ
Published On :

ಬೆಂಗಳೂರು: ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು, ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಂಡಾಯ ಶಾಸಕರನ್ನು ಸೇರಿಸಿಕೊಂಡು ಸರ್ಕಾರ ನಡೆಸುವುದು ಸುಲಭದ ಮಾತಲ್ಲ, 'ಹಾಲು ಕುಡಿದ ಮಕ್ಕಳೇ ಬದುಕುವುದು ಕಷ್ಟವಿರುವಾಗ, ವಿಷ ಕುಡಿದ ಮಕ್ಕಳು ಬದುಕುತ್ತವಾ? ಎಂದು ಬರೆದು ಕೊಂಡಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ತಾಣ ಒದಗಿಸುವಂತೆ ಕಳೆದ ವಾರವೇ ಆಗ್ರಹಿಸಿದ್ದೆ, ಸರ್ಕಾರ ಇನ್ನೂ ಕಣ್ಣುಮುಚ್ಚಿ ಕೂತಿದೆ. ಎರಡು ಮೂರು ಸಾವಿರ ಪರಿಹಾರ ನೀಡಿದರೆ ಕಷ್ಟ ದೂರಾಗುವುದಿಲ್ಲ. ನಷ್ಟವನ್ನು ಸರಿಯಾಗಿ ಅಂದಾಜಿಸಿ, ಪರಿಹಾರ ಒದಗಿಸಬೇಕು. ಇದಕ್ಕೆ ಬೇಕಾದ ಅನುದಾನವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳು ಒಳಗೊಂಡಂತೆ ಸರ್ಕಾರದ ಎಲ್ಲ ಮಂತ್ರಿಗಳು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗೆ ಸ್ಪಂದಿಸಬೇಕು. ಇದನ್ನು ಬಿಟ್ಟು ನಿತ್ಯ ಬೆಂಗಳೂರಿನಿಂದ ದೆಹಲಿ, ದೆಹಲಿಯಿಂದ ಬೆಂಗಳೂರಿಗೆ ಓಡಾಡುತ್ತಿದ್ದರೆ ಜನರ ಕಷ್ಟ ಕೇಳುವವರಾರು ? ಎಂದು ಕಿಡಿಕಾರಿರುವ ಅವರು, ಅನೈತಿಕ ಮಾರ್ಗದ ಮೂಲಕ‌ ಅಧಿಕಾರ ಹಿಡಿದವರ ಕತೆಯೇ ಹೀಗೆ, ಅವರಿಗೆ ಜನಪರ ಕಾಳಜಿಯಿರಲ್ಲ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.