ಬಿಜೆಪಿ ಸದಸ್ಯತ್ವ ಅಭಿಯಾನ: 5ನೇ ಸ್ಥಾನದಲ್ಲಿ ಕರ್ನಾಟಕ
ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಕರ್ನಾಟಕ ಐದನೇ ಸ್ಥಾನ ಪಡೆದಿದೆ.

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಕರ್ನಾಟಕ ಐದನೇ ಸ್ಥಾನ ಪಡೆದಿದೆ.
ರಾಜ್ಯದಲ್ಲಿ ಈವರೆಗೆ 27,77,823 ಸದಸ್ಯತ್ವ ನೋಂದಣಿಯಾಗಿದ್ದು, ದೇಶದಲ್ಲಿ ಕರ್ನಾಟಕ ಉತ್ತಮ ಪ್ರಗತಿ ಸಾಧಿಸಿದೆ.
ಸದಸ್ಯತ್ವ ಕುರಿತ ಪ್ರಗತಿ ಪರಿಶೀಲನಾ ಸಭೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆಯಿತು. ರಾಜ್ಯದ ಪ್ರಗತಿ ಬಗ್ಗೆ ನಡ್ಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಬಿಜೆಪಿ ಸದಸ್ಯತಾ ಅಭಿಯಾನದ ಸಂಚಾಲಕ, ವಿಧಾನ ಪರಿಷತ್ ಸದಸ್ಯರೂ ಆದ ಎನ್.ರವಿಕುಮಾರ್ ರಾಜ್ಯದ ಸದಸ್ಯತ್ವ ಅಭಿಯಾನದ ವರದಿ ನೀಡಿದರು. ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಬಿಜೆಪಿ ಸದಸ್ಯತಾ ಅಭಿಯಾನದ ಸಹಸಂಚಾಲಕ ಜಗದೀಶ ಹಿರೇಮನಿ ಸಭೆಯಲ್ಲಿ ಭಾಗವಹಿಸಿದ್ದರು.
ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸದಸ್ಯತಾ ಅಭಿಯಾನದ ರಾಷ್ಟ್ರೀಯ ಸಂಚಾಲಕರಾದ ಶಿವರಾಜ್ ಸಿಂಗ್ ಚವ್ಹಾಣ್, ರಾಷ್ಟ್ರೀಯ ಸಂಘಟನಾ ಚುನಾವಣಾ ಉಸ್ತುವಾರಿ ರಾಧಾಮೋಹನ ಸಿಂಗ್ ಹಾಗೂ ರಾಷ್ಟ್ರೀಯ ಸಂಘಟನಾ ಚುನಾವಣಾ ಸಹಉಸ್ತುವಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


