ರಾಜಕೀಯ

ಇಡಿ ಸಮನ್ಸ್: ಮಧ್ಯಂತರ ರಕ್ಷಣೆ ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನವದೆಹಲಿಯ ಮನೆಗಳಲ್ಲಿ 8 ಕೋಟಿಗೂ ಹೆಚ್ಚು ಮೌಲ್ಯದ ಅನಧಿಕೃತ ನಗದು ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಮಾಜಿ...

ಇಡಿ ಸಮನ್ಸ್: ಮಧ್ಯಂತರ ರಕ್ಷಣೆ ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಡಿಕೆ ಶಿವಕುಮಾರ್
Published On :

ಬೆಂಗಳೂರು: ನವದೆಹಲಿಯ ಮನೆಗಳಲ್ಲಿ 8 ಕೋಟಿಗೂ ಹೆಚ್ಚು ಮೌಲ್ಯದ ಅನಧಿಕೃತ ನಗದು ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೆಮೋ ಅನ್ನು  ಹೈಕೋರ್ಟ್ ತಿರಸ್ಕರಿಸಿದೆ.

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಇಡಿ ಅಧಿಕಾರಿಗಳು, ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ನೋಟಿಸ್ ಗೆ ತಡೆ ನೀಡುವಂತೆ ಮಾಡಿದ್ದ ಮನವಿಯನ್ನು ಕೂಡ ನ್ಯಾಯಪೀಠ ತಿರಸ್ಕರಿಸಿದೆ. 

ಐಪಿಸಿ ಸೆಕ್ಷನ್ 120 ಬಿ ಅನುಸಾರ ಬೇನಾಮಿ ಆಸ್ತಿ ತಡೆ ಕಾಯ್ದೆಯಡಿ ಈ ಪ್ರಕರಣ ವಿಚಾರಣೆಗೆ ಸೂಕ್ತವಾಗಿದೆ. ಆರೋಪಿಗಳು ತನಿಖಾಧಿಕಾರಿಯ ಮುಂದೆ ಹಾಜರಾಗಿ ತನ್ನ ಅಹವಾಲು ಸಲ್ಲಿಸಬಹುದು ಎಂದು ತೀರ್ಪು ನೀಡಿದ್ದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಸಸದಸ್ಯ ಪೀಠದ ತೀರ್ಪನ್ನು ಮರುಪರಿಶೀಲಿಸುವಂತೆ ಡಿ.ಕೆ.ಶಿವಕುಮಾರ್ ಶುಕ್ರವಾರ ಅರ್ಜಿ ಸಲ್ಲಿಸಿದ್ದರು. 

ಆದರೆ, ಈ ಮೆಮೋ ಅನ್ನು ಮತ್ತೊಮ್ಮೆ ತಿರಸ್ಕರಿಸಿರುವ ನ್ಯಾಯಪೀಠ, ಪ್ರಕರಣದ ಎಲ್ಲಾ ಅಂಶಗಳನ್ನು ಪರಿಗಣಿಸಿಯೇ ತೀರ್ಪು ನೀಡಲಾಗಿದೆ. ಆದ್ದರಿಂದ  ಯಾವುದೇ ತಿದ್ದುಪಡಿ  ತರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.