ರಾಷ್ಟ್ರಕ್ಕೆ ಒಂದೇ ಧ್ವಜ, ಎರಡೆರಡು ಬೇಡ; ನಾಡಧ್ವಜ ಬೇಡ ಎಂಬ ಸಿಟಿ ರವಿ ಹೇಳಿಕೆಗೆ ಕನ್ನಡಿಗರಿಂದ ಆಕ್ರೋಶ!
ರಾಷ್ಟ್ರಕ್ಕೆ ಒಂದೇ ಧ್ವಜ ಇರಲಿ. ಕರ್ನಾಟಕಕ್ಕೆ ಪ್ರತ್ಯೇಕವಾದ ಅಧಿಕೃತ ನಾಡ ಧ್ವಜದ ಅಗತ್ಯವಿಲ್ಲ ಎಂಬ ಸಚಿವ ಸಿಟಿ ರವಿ ಅವರ ಹೇಳಿಕೆಗೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ರವಿ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಷ್ಟ್ರಕ್ಕೆ ಒಂದೇ ಧ್ವಜ ಇರಲಿ. ಕರ್ನಾಟಕಕ್ಕೆ ಪ್ರತ್ಯೇಕವಾದ ಅಧಿಕೃತ ನಾಡ ಧ್ವಜದ ಅಗತ್ಯವಿಲ್ಲ ಎಂಬ ಸಚಿವ ಸಿಟಿ ರವಿ ಅವರ ಹೇಳಿಕೆಗೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ರವಿ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಡಧ್ವಜವನ್ನು ಸಾಂಸ್ಕೃತಿಕವಾಗಿ ಬಳಸಲು ಅವಕಾಶವಿದೆಯೇ ಹೊರತು ಸಾಂವಿಧಾನಾತ್ಮಕವಾಗಿ ಬಳಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರಕ್ಕೆ ಒಂದೇ ತ್ರಿವರ್ಣ ಧ್ವಜ ಮಾತ್ರ ಬಳಕೆ ಮಾಡಲು ಧ್ವಜ ಸಂಹಿತೆಯಲ್ಲಿ ಅವಕಾಶ ಇದೆ ಎಂದು ಹೇಳುವ ಮೂಲಕ ಪ್ರತ್ಯೇಕ ಕನ್ನಡ ನಾಡ ಧ್ವಜ ಪ್ರಸ್ತಾವನೆ ಕೈಬಿಟ್ಟಿರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ.
ಸಿಟಿ ರವಿ ಅವರ ಈ ಹೇಳಿಕೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು ಕನ್ನಡ ಬಾವುಟದ ಹಿರಿಮೆ ಗೊತ್ತಿಲ್ಲದ ಜನಪ್ರತಿನಿಧಿಗಳು ಯಾರೇ ಆಗಲಿ ರಾಜ್ಯ ಬಿಟ್ಟು ತೊಲಗಲಿ. ನೆಲ ಜಲಗಡಿ ಭಾಷೆ ಇವುಗಳ ಮೇಲೆ ಸ್ವಾಭಿಮಾನ ಇಲ್ಲದ ಬಿಜೆಪಿಯವರು ಮಾತ್ರ ಕನ್ನಡದ ಅಸ್ಮಿತೆಗೆ ಕನ್ನಡದ ಧ್ವಜಕ್ಕೆ ಅವಮಾನ ಮಾಡುವ ಆಲೋಚನೆ ಮಾಡಲು ಸಾಧ್ಯ ಎಂದು ಹಲವರು ಛೇಡಿಸಿದ್ದಾರೆ.
ನೆಲ ಜಲ ಗಡಿ ಭಾಷೆ ಇವುಗಳ ಮೇಲೆ ಸ್ವಾಭಿಮಾನ ಇಲ್ಲದ ಬಿಜೆಪಿಯವರು ಮಾತ್ರ ಕನ್ನಡದ ಅಸ್ಮಿತೆಗೆ ಕನ್ನಡದ ಧ್ವಜಕ್ಕೆ ಅವಮಾನ ಮಾಡುವ ಆಲೋಚನೆ ಮಾಡಲು ಸಾಧ್ಯ.
—
ಕರ್ನಾಟಕದ ಇತಿಹಾಸ, ಪರಂಪರೆ, ಸಂಸ್ಕೃತಿಯ ಪ್ರತೀಕವು ನಮ್ಮ ಕನ್ನಡದ ಬಾವುಟ. #ಕನ್ನಡಧ್ವಜ_ಕನ್ನಡಿಗರಹೆಮ್ಮೆ #KannadaFlag #KarnatakaFlag pic.twitter.com/ZJg6jd5auX
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


