ಎಸ್ಆರ್ ವಿಶ್ವನಾಥ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎಸ್ಆರ್ ವಿಶ್ವನಾಥ್ ಅವರನ್ನು ನೇಮಿಸಲಾಗಿದ್ದು, ಇವರಿಗೆ ಸಂಪುಟ ದರ್ಜೆ ನೀಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎಸ್ಆರ್ ವಿಶ್ವನಾಥ್ ಅವರನ್ನು ನೇಮಿಸಲಾಗಿದ್ದು, ಇವರಿಗೆ ಸಂಪುಟ ದರ್ಜೆ ನೀಡಿ ಆದೇಶ ಹೊರಡಿಸಲಾಗಿದೆ.
ಸಚಿವ ಸ್ಥಾನ ಸಿಗದ ಹಿನ್ನೆಲೆ ಅಸಮಾಧಾನ ಗೊಂಡಿದ್ದ ವಿಶ್ವನಾಥ್ ಅವರನ್ನು ಈ ರೀತಿ ಮನವೊಲಿಸಲಾಗಿದೆ. ಯಲಹಂಕ ಕ್ಷೇತ್ರದಿಂದ ಸತತ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಎಸ್.ಆರ್. ವಿಶ್ವನಾಥ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಈಗ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ಮುಖ್ಯಮಂತ್ರಿ ಯಡಿಯೂರಪ್ಪ ನೇಮಕ ಮಾಡಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ಅತ್ಯಂತ ಪ್ರಭಾವಿ ಹುದ್ದೆಯಾಗಿದ್ದು, ಸಂಪುಟ ದರ್ಜೆಯ ಸ್ಥಾನಮಾನ ಈ ಹುದ್ದೆಗಿದೆ. ಶಾಸಕ ಎಸ್.ಆರ್ ವಿಶ್ವನಾಥ್ ಮೊದಲಿನಿಂದಲೂ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ಬಳಗದಲ್ಲಿದ್ದು, ಅವರ ಕಟ್ಟಾ ಬೆಂಬಲಿಗರಾಗಿದ್ದಾರೆ. ಈ ಹಿಂದೆ ಸಮ್ಮಿಶ್ರ ಸರ್ಕಾರ ಪತನದ ಸಂದರ್ಭದಲ್ಲಿ ಬಿಜೆಪಿ ಶಾಸಕರಿಗೆ ತಮ್ಮ ಕ್ಷೇತ್ರದ ರೆಸಾರ್ಟ್ ನಲ್ಲೇ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿ, ಶಾಸಕರು ಎಲ್ಲರು ಒಟ್ಟಾಗಿ ಇರುವಂತೆ ನೋಡಿಕೊಂಡು ರಾಜಕೀಯವಾಗಿ ಎಲ್ಲವನ್ನೂ ನಿಭಾಯಿಸಿದ್ದರು.
ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತಾದರೂ ಬೆಂಗಳೂರಿನಿಂದ ಈಗಾಗಲೇ ನಾಲ್ಕು ಮಂದಿ ಸಚಿವರಾಗಿರುವುದರಿಂದ ಮತ್ತೆ ಬೆಂಗಳೂರಿನ ಶಾಸಕರಿಗೆ ಸಚಿವ ಸ್ಥಾನ ನೀಡುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಎಸ್.ಆರ್. ವಿಶ್ವನಾಥ್ ಅವರ ಮನವೊಲಿಸಿದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


