ಬೈಎಲೆಕ್ಷನ್ ಗೆ ಮುನ್ನ ಆಪರೇಷನ್:ಕೈ ಬಿಟ್ಟು ಕಮಲ ಹಿಡಿದ ಬಿಬಿಎಂಪಿ ಸದಸ್ಯ ಆರ್ ವಸಂತಕುಮಾರ್
ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಸಂಪಂಗಿರಾಮನಗರ ವಾರ್ಡ್‍ನ ಕಾಂಗ್ರೆಸ್ ಸದಸ್ಯ ಆರ್ ವಸಂತಕುಮಾರ್ ಮಂಗಳವಾರ ಕಾಂಗ್ರೆಸ್ ತೊರೆದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಸಂಪಂಗಿರಾಮನಗರ ವಾರ್ಡ್‍ನ ಕಾಂಗ್ರೆಸ್ ಸದಸ್ಯ ಆರ್ ವಸಂತಕುಮಾರ್ ಮಂಗಳವಾರ ಕಾಂಗ್ರೆಸ್ ತೊರೆದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ನಗರದ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿಯವರು ವಸಂತ್ ಕುಮಾರ್ ಅವರನ್ನು ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಸಂತಕುಮಾರ್ , ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಬಿಬಿಎಂಪಿಯಲ್ಲಿ ಬಿಜೆಪಿ ಆಡಳಿತವಿದೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರವಿದೆ. ಇದರಿಂದ ತಮ್ಮ ವಾರ್ಡ್ ಸೇರಿದಂತೆ ಇಡೀ ನಗರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ತಾವು ಪಕ್ಷ ಸೇರುತ್ತಿರುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


