ಜೆಡಿಎಸ್ ನೊಂದಿಗೆ ಯಾವುದೇ ಒಳ ಒಪ್ಪಂದವಿಲ್ಲ- ಸಿದ್ದರಾಮಯ್ಯ ಸ್ಪಷ್ಟನೆ
ಜೆಡಿಎಸ್ ನೊಂದಿಗೆ ಯಾವುದೇ ಒಳ ಒಪ್ಪಂದ ವಾಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಪಪಡಿಸಿದ್ದಾರೆ.

ಮೈಸೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಚರಣದ ಪ್ರಚಾರ ನಡೆಸುತ್ತಿದ್ದಾರೆ.
ಹುಣಸೂರಿನಲ್ಲಿರುವ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಇವರಿಗೆ ಮಾಜಿ ಸಚಿವ ಯುಟಿ ಖಾದರ್, ಮಾಜಿ ಸಂಸದ ಧ್ರುವ ನಾರಾಯಣ್ ಮತ್ತಿತರರು ಸಾಥ್ ನೀಡುತ್ತಿದ್ದಾರೆ.
ಇದಕ್ಕೂ ಮುನ್ನ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಚಾರವನ್ನು ಅಲ್ಲಗಳೆದರು. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ತಗೆ ಡಿಸೆಂಬರ್ 9ರ ಬಳಿಕ ಸಿಹಿ ಹಂಚುತ್ತಾರೆ ಎಂದು ಜೆಡಿಎಸ್ ಮುಖಂಡ ಕುಮಾರಸ್ವಾಮಿ ಹೇಳಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ. ಸಿಹಿ ಹಂಚುತ್ತಾರೆ ಎಂದರೆ 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದರ್ಥ. ಇದನ್ನು ನೀವು ಬೇಕಾದ ರೀತಿಯಲ್ಲಿ ಅರ್ಥಮಾಡಿಕೊಳ್ಳಿ ಎಂದು ಪರ್ತಕರ್ತರಿಗೆ ಸಲಹೆ ನೀಡಿದರು.
ಬಿಜೆಪಿಯಷ್ಟೆ ಜೆಡಿಎಸ್ ಸಹ ನಮಗೆ ರಾಜಕೀಯ ವೈರಿ. ನಾವು ಈ ಚುನಾವಣೆಯನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈ ಎರಡು ಪಕ್ಷಗಳು ಈ ಉಪಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಜೆಡಿಎಸ್‌ನೊಂದಿಗೆ ಯಾವುದೇ ಒಳಒಪ್ಪಂದ ಮಾಡಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


