ಉಪ ಚುನಾವಣೆ ಬಳಿಕ ಯಾವುದೇ ಪಕ್ಷದೊಂದಿಗೆ ಮೈತ್ರಿ ಪ್ರಶ್ನೆಯೇ ಇಲ್ಲ- ದೇವೇಗೌಡ
ಉಪ ಚುನಾವಣೆ ಬಳಿಕ ಬಿಜೆಪಿ ಅಥವಾ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ: ಉಪ ಚುನಾವಣೆ ಬಳಿಕ ಬಿಜೆಪಿ ಅಥವಾ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಭಯ ಪಕ್ಷಗಳಿಂದ ಜೆಡಿಎಸ್ ಸಾಕಷ್ಟು ನೋವು ಅನುಭವಿಸಿದೆ. ಚುನಾವಣೆ ನಂತರ ಮೈತ್ರಿ ಕುರಿತ ಊಹೆಯನ್ನಾಧರಿಸಿದ ವರದಿಗಳನ್ನು ಮಾಧ್ಯಮಗಳು ಪ್ರಸಾರ ಮಾಡಬಾರದೆಂದು ತಾಕೀತು ಮಾಡಿದರು.
ಕಾಂಗ್ರೆಸ್ ನೊಂದಿಗೆ ಜೆಡಿಎಸ್ ಕೈ ಜೋಡಿಸದಿದ್ದರೆ ಏಕೆ ಬಿಜೆಪಿ ಸರ್ಕಾರ ಪತನಗೊಳ್ಳಲಿದೆ ಎಂದು ಪ್ರಶ್ನಿಸಿದ ಅವರು, ಬಿಜೆಪಿ 105 ಸ್ಥಾನಗಳನ್ನು ಹೊಂದಿದೆ. ನಾವು ಯಾವುದೇ ಪಕ್ಷಕ್ಕೂ ಬೆಂಬಲ ವ್ಯಕ್ತಪಡಿಸಿದೆ ಪ್ರತಿಪಕ್ಷ ಸಾಲಿನಲ್ಲಿ ಕುಳಿತುಕೊಳ್ಳುವುದಾಗಿ ತಿಳಿಸಿದರು.
ಕಳೆದ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಗುಲಾಮ್ ನಬಿ ಅಜಾದ್ ಅವರನ್ನು ಕಳುಹಿಸಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಆದಾಗ್ಯೂ, ಮೈತ್ರಿ ನಿಯಮಗಳನ್ನು ಪಾಲಿಸುವಲ್ಲಿ ಕಾಂಗ್ರೆಸ್ ವಿಫಲವಾಯಿತು ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


