ರಾಜಕೀಯ

ನಾನು ಬಿಡುವುದಿಲ್ಲ; ಕನಕಪುರಕ್ಕೆ ಮತ್ತೆ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬಿಎಸ್‌ವೈಗೆ ಶಿವಕುಮಾರ್ ಪತ್ರ

ಮೈತ್ರಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಸರ್ಕಾರದ ಅದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ನಾನು ಬಿಡುವುದಿಲ್ಲ; ಕನಕಪುರಕ್ಕೆ ಮತ್ತೆ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬಿಎಸ್‌ವೈಗೆ ಶಿವಕುಮಾರ್ ಪತ್ರ
ಡಿಕೆ ಶಿವಕುಮಾರ್
Published On :

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಸರ್ಕಾರದ ಅದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಈ  ಕುರಿತು ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರ ಬರೆದಿರುವ ಶಿವಕುಮಾರ್, ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜು ರದ್ದುಪಡಿಸಿ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿರುವುದು ಸರಿಯಲ್ಲ. ಕೂಡಲೇ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರಾಗಿರುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಕನಕಪುರಕ್ಕೆ ಮಂಜೂರಾಗಿದ್ದ ಕಾಲೇಜು ರದ್ದುಮಾಡಿರುವುದಕ್ಕೆ ನಮ್ಮ ಆಕ್ಷೇಪವಿದೆ. ಕೂಡಲೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಭೂಮಿಪೂಜೆ ನೆರವೇರಿಸಲು ಸಮಯ ನೀಡುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.